Advertisement

ಮೈತ್ರಿ ಸರ್ಕಾರಕ್ಕೆ ಅಪಾಯವಿಲ್ಲ: ಎಂಬಿಪಿ

01:19 AM May 28, 2019 | Sriram |

ಬೆಂಗಳೂರು: ‘ಲೋಕಸಭೆ ಚುನಾವಣೆಯ ಸೋಲಿನಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ’ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

Advertisement

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ವಿಧಾನಸಭೆ ಚುನಾವಣೆಗೂ ವ್ಯತ್ಯಾಸವಿದೆ. ಪುಲ್ವಾಮಾ ದಾಳಿ ಸೇರಿ ಅನೇಕ ಕಾರಣಗಳು ಬಿಜೆಪಿ ಗೆಲುವಿಗೆ ಕಾರಣವಾಗಿವೆ. ಸೋಲಿಗೆ ಏನೇ ಕಾರಣ ಇರಬಹುದು. ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಈ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರನ್ನು ಕಾಂಗ್ರೆಸ್‌ ಶಾಸಕರು ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಎಸ್‌.ಎಂ.ಕೃಷ್ಣ ಅವರು ನಮ್ಮ ನಾಯಕರಾಗಿದ್ದರು. ರಾಜಕೀಯ ಹೊರತು ಪಡಿಸಿ ಅವರನ್ನು ಭೇಟಿ ಮಾಡಿದ್ದಾರೆ. ಕೃಷ್ಣಾ ಅವರು ನನಗೂ ದೂರವಾಣಿ ಮೂಲಕ ಮಾತನಾಡಿದ್ದರು. ಅದಕ್ಕೆ ಬೇರೆ ಅರ್ಥ ಕಲ್ಪಿಸಲು ಸಾಧ್ಯವೇ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next