Advertisement

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

12:08 PM Apr 16, 2021 | Team Udayavani |

ಕೊಪ್ಪಳ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಜನರೂ ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

Advertisement

ಕೊಪ್ಪಳದ ಗಿಣಗೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸರ್ಕಾರವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಜನರ ಸಹಕಾರವೂ ಮುಖ್ಯ ಎಂದರು.

ಕೊಪ್ಪಳ ತಾಲೂಕಿನ ಕಾಸನಕಂಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಈ ಹಿಂದೆ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆದಿದೆ. 46 ಕೋಟಿ ರೂಪಾಯಿ ಖರ್ಚು ಮಾಡಿದ್ದು, ಅವುಗಳ ಪೈಪ್ ಸರಿ ಇಲ್ಲ. ನಾನು ಸ್ಥಳ ಪರಿಶೀಲನೆ ಮಾಡಿದ್ದೇವೆ. ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಈ ಕಾಮಗಾರಿ ತ್ವರಿತಗತಿಯಲ್ಲಿ ಪುನಃ ಚಾಲನೆ ನೀಡಲಾಗುವುದು. ಇನ್ನೂ 240 ಎಕರೆ ವಿಸ್ತಾರದ ಗಿಣಗೇರಿ ಕೆರೆ ಹೂಳೆತ್ತುವ ಕಾಮಗಾರಿ ಜನರ ಸಹಕಾರದ ಜೊತೆಗೆ ನಡೆದಿದೆ. ಗವಿಶ್ರೀ ನೇತೃತ್ವದಲ್ಲಿ ಕೆರೆ ಹೂಳೆತ್ತುವ ಕೆಲಸಕ್ಕೆ ಚಾಲನೆ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಒಂದೆರಡು ದಿನದಲ್ಲಿ 1 ರಿಂದ 9 ತರಗತಿ ಪರೀಕ್ಷೆ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್

ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಈಶ್ವರಪ್ಪ- ಸಿದ್ದರಾಮಯ್ಯ ಎರಡೂ ಮದ್ದಾನೆಗಳು. ಅವರವರ ಮಾತುಗಳಿಗೆ ಅವರವರೇ ಪ್ರತಿಕ್ರಿಯೆ ಕೊಡುತ್ತಾರೆ. ನಾನ್ಯಾಕೆ ಪ್ರತಿಕ್ರಿಯೆ ಕೊಡಲಿ ಎಂದರು.

Advertisement

ಬೆಲೆ ಕುಸಿತ ಪ್ರಶ್ನೆಗೆ ಉಡಾಫೆ ಉತ್ತರ: ಬೆಳೆಗಳ ಬೆಲೆ ಕುಸಿತಕ್ಕೆ ಸಂಬಂಧಿಸಿದಂತೆ ಪ್ರಶ್ನೆಗೆ ಸಚಿವ ಬಿ.ಸಿ. ಪಾಟೀಲ್ ಅವರು ನೀವೆಲ್ಲ ವಿವಾದಾತ್ಮಕ ಪ್ರಶ್ನೆ ಕೇಳಬೇಡಿ ಎಂದು ಸಚಿವರು ಗರಂ ಆದರು. ರೈತರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಸರ್ಕಾರ ರೈತರ ನೆರವಿಗೆ ಬರಬೇಕು ಎನ್ನುವುದಕ್ಕೂ ಅವರು ಗರಂ ಆದರು. ಕೊನಗೆ ರೈತರು ಬೆಲೆ ಕುಸಿತದಿಂದ ನಷ್ಟ ಅನುಭವಿಸಿದರೆ ಬೆಳೆ ನಾಶ ಮಾಡದೇ ಸ್ವಲ್ಪದಿನ ಕಾಯ್ದು ಬೆಳೆ ಮಾರಾಟ ಮಾಡಬೇಕು ಸಮಜಾಯಿಷಿ ನೀಡಿದರು.

ತುಂಗಭದ್ರಾ ಜಲಾಶಯದಿಂದ ಏ.30ರ ವರೆಗೂ ಕಾಲುವೆಗೆ ನೀರು ಹರಿಸಲು ಹಂತ ಹಂತವಾಗಿ ನಿರ್ಧಾರ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next