Advertisement

ಗ್ರಾಮ ಪಂಚಾಯಿತಿಗೆ ನೇಮಕ ಅಧಿಕಾರವಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ

12:53 PM Feb 16, 2022 | Team Udayavani |

ಬೆಂಗಳೂರು : ಗ್ರಾಮ ಪಂಚಾಯಿತಿಯಲ್ಲಿ ನೇಮಕಕ್ಕೆ ಯಾವುದೇ ಗ್ರಾಮ‌ ಪಂಚಾಯಿತಿಗೆ ಅಧಿಕಾರ ನೀಡಿಲ್ಲ. ಜಿಲ್ಲಾ ಪಂಚಾಯಿತ್ ಸಿಇಓಗಳೇ ಈ ಕಾರ್ಯ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

Advertisement

ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೂನ್ಯವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅವರಿಗೆ ನೇಮಕ ಅಧಿಕಾರ ನೀಡಿದರೆ ಒಬ್ಬೊಬ್ಬ ಅಧ್ಯಕ್ಷರು ಬಂದಾಗ ಒಂದೊಂದು ರೀತಿಯ ಸಮಸ್ಯೆ ಆಗುತ್ತದೆ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ನೇಮಕ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದರು.

ಗ್ರಾಮ‌ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ನೀಡಬೇಕು. ಅವರು ನೇಮಕ ಕ್ಕೆ ಅಗತ್ಯವಾದ ಕ್ರಮ ತೆಗೆದುಕೊಳ್ಳುತ್ತಾರೆ. ನೇಮಕ ಅಧಿಕಾರವನ್ನು ಪಂಚಾಯಿತಿಗಳಿಗೆ ಕೊಡುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next