ನವದೆಹಲಿ: ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ಈದ್ ಆಚರಣೆ ವೇಳೆ ಗೋ ಹತ್ಯೆಗೆ ಸಂಬಂಧಿಸಿದಂತೆ ಯಾವುದೇ ನಿಷೇಧ ಹೇರಿಲ್ಲ ಎಂದು ತಿಳಿಸಿದೆ. ಪ್ರಾಣಿಗಳ ಹತ್ಯೆಗೆ ಸಂಬಂಧಿಸಿದಂತೆ ಈ ಹಿಂದೆ ಪ್ರಾಣಿ ದಯಾ ಸಂಘಟನೆ ಈದ್ ಸಂದರ್ಭದಲ್ಲಿ ಹಸು, ಒಂಟೆಗಳನ್ನು ಅಕ್ರಮವಾಗಿ ಕೊಲ್ಲುವುದನ್ನು ನಿಷೇಧಿಸುವಂತೆ ಕೋರಿ ಆದೇಶ ಹೊರಡಿಸಿತ್ತು ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ:ದೆಹಲಿ ಪ್ರವಾಸ ಮುಗಿಸಿದ ಕೂಡಲೇ ಸಚಿವ ಸಂಪುಟ ಸಭೆ ಕರೆದ ಸಿಎಂ!
ಜಮ್ಮು-ಕಾಶ್ಮೀರ ಆಡಳಿತವು ನಿಯಮಗಳ ಅನುಸಾರವಾಗಿ ಪ್ರಾಣಿಗಳನ್ನು ಹತ್ಯೆ ಮಾಡುವುದನ್ನು ನಿಷೇಧಿಸುವ ಯಾವುದೇ ಆದೇಶವನ್ನು ನೀಡಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸ್ಪಷ್ಟಪಡಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಪ್ರಾಣಿಗಳ ಹತ್ಯೆಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಾಣಿ ಕಲ್ಯಾಣ ಮಂಡಳಿ ಕಾನೂನು ಮತ್ತು ನಿಯಮಗಳನ್ನು ಅನುಸರಿಸುವಂತೆ ಮಾರ್ಗಸೂಚಿಯನ್ನು ಜಾರಿಗೊಳಿಸುತ್ತದೆ. ಅದೇ ರೀತಿ ಈ ವರ್ಷವೂ ಮಾರ್ಗಸೂಚಿ, ಸಲಹೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಹಿಂದೆ ನೀಡಲಾದ ಆದೇಶ ತಪ್ಪಾಗಿದೆ ಎಂದು ಸ್ಪಷ್ಟನೆ ನೀಡಿದೆ. ಈದ್ ಗೆ ಪ್ರಾಣಿ ವಧೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಕಣಿವೆ ಪ್ರದೇಶದಲ್ಲಿ ಧಾರ್ಮಿಕ ಹಾಗೂ ರಾಜಕೀಯ ಪಕ್ಷಗಳು ಕಟುವಾಗಿ ಟೀಕಿಸಿದ್ದವು.