ವಿಜಯಪುರ:ಬಿಜೆಪಿ, ಆರೆಸ್ಸೆಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಟುವಾಗಿ ವಾಗ್ದಾಳಿ ನಡೆಸುವತ್ತಿರುವ ನಡುವೆಯೇ ಕರ್ನಾಟಕದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ)ವನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತೀಯ ಜನತಾ ಪಕ್ಷ ಮೊದಲು ಕ್ರಿಮಿನಲ್ ರಾಜಕೀಯದಿಂದ ಹೊರಬರಲಿ. ಕೋಮುವಾದವನ್ನು ಹುಟ್ಟುಹಾಕುತ್ತಿರುವುದನ್ನು ನಿಲ್ಲಿಸಲಿ ಎಂದು ಹೇಳಿದರು.
ಅಲ್ಲದೇ ಕರ್ನಾಟಕದಲ್ಲಿ ಪಿಎಫ್ಐ ಯನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.
ಪಿಎಫ್ಐ ಜತೆ ಕಾಂಗ್ರೆಸ್ ಒಳಒಪ್ಪಂದ: ಶೋಭಾ
ಸಿಎಂ ಸಿದ್ದರಾಮಯ್ಯ ಹೇಳಿಕೆ ಹಾಗೂ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರ ಪ್ರತಿಕ್ರಿಯೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಕೇರಳದಲ್ಲಿ ಕಾನೂನು ಬಾಹಿರ ಕೆಲಸ ಮಾಡುತ್ತಿರುವ ಪಿಎಫ್ಐಗೆ ಕರ್ನಾಟಕದಲ್ಲಿ ಬೆಂಬಲ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಪಿಎಫ್ಐ ಜತೆ ಕರ್ನಾಟಕದಲ್ಲಿ ಕಾಂಗ್ರೆಸ್ ಮೈತ್ರಿಗೆ ಮುಂದಾಗಿದೆ, ಹೀಗಾಗಿಯೇ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಸಂಘಟನೆಗೆ ಜಾಗ ನೀಡಲಾಗಿದೆ ಎಂದು ದೂರಿದರು.