Advertisement

ಮುಗಿಯಿತಾ ಧೋನಿ ಯುಗ? ವಾರ್ಷಿಕ ಗುತ್ತಿಗೆಯಿಂದ ಮಾಹಿ ಕೈಬಿಟ್ಟ ಬಿಸಿಸಿಐ

09:50 AM Jan 17, 2020 | keerthan |

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಂಡದಿಂದ ಶಾಶ್ವತವಾಗಿ ದೂರವಾಗಿದ್ದಾರೆಯೇ? ರಜೆಯಲ್ಲಿರುವ ಧೋನಿ ಮತ್ತೆ ತಂಡಕ್ಕೆ ಬರುವುದಿಲ್ಲವೇ? ಇಂತಹ ಅನುಮಾನ ಹುಟ್ಟು ಹಾಕಿದೆ ಬಿಸಿಸಿಐನ ವಾರ್ಷಿಕ ಗುತ್ತಿಗೆ.

Advertisement

2019-20ರ ಸಾಲಿನ ಟೀಂ ಇಂಡಿಯಾ ಪುರುಷ ಆಟಗಾರರ ವಾರ್ಷಿಕ ಗುತ್ತಿಗೆಯನ್ನು ಬಿಸಿಸಿಐ ಇಂದು ಪ್ರಕಟಿಸಿದ್ದು, ಅದರಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಕೈಬಿಡಲಾಗಿದೆ.

ಕಳೆದ ಸಾಲಿನ ಗುತ್ತಿಗೆಯಲ್ಲಿ ಧೋನಿ ‘ಎ’ ಗುತ್ತಿಗೆ ಹೊಂದಿದ್ದರು. ಆದರೆ ಕಳೆದ ಜುಲೈನಲ್ಲಿ ನಡೆದ ವಿಶ್ವಕಪ್ ಸೆಮಿ ಫೈನಲ್ ನಂತರ ಬಿಸಿಸಿಐ ನಿಂದ ರಜೆ ಪಡೆದಿದ್ದ ಮಾಹಿ ನಂತರ ಯಾವುದೇ ಕ್ರಿಕೆಟ್ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ.

ನವದೀಪ್ ಸೈನಿ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್ ಮತ್ತು ದೀಪಕ್ ಚಾಹರ್ ಅವರಿಗೆ ಮೊದಲ ಬಾರಿಗೆ ಬಿಸಿಸಿಐ ವಾರ್ಷಿಕ ಗುತ್ತಿಗೆ ನೀಡಲಾಗಿದೆ.

ಕನ್ನಡಿಗ ಕೆ ಎಲ್ ರಾಹುಲ್ ‘ಎ’ ಗುತ್ತಿಗೆ ಪಡೆದಿದ್ದರೆ, ಟೆಸ್ಟ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ‘ಬಿ’ ಗುತ್ತಿಗೆ ಪಡೆದಿದ್ದಾರೆ.

Advertisement

ವಾರ್ಷಿಕ ಗುತ್ತಿಗೆ

ಎ+ (7 ಕೋಟಿ): ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ

ಎ (5 ಕೋಟಿ): ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕೆ ಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್, ರಿಷಭ್ ಪಂತ್.

ಬಿ (3 ಕೋಟಿ): ವೃದ್ಧಿಮಾನ್ ಸಾಹ, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್.

ಸಿ (1 ಕೋಟಿ): ಕೇದಾರ್ ಜಾಧವ್, ನವದೀಪ್ ಸೈನಿ, ದೀಪಕ್ ಚಾಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದೂಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್.

Advertisement

Udayavani is now on Telegram. Click here to join our channel and stay updated with the latest news.

Next