Advertisement

ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಇಲ್ಲ: ಸಚಿವ ಈಶ್ವರಪ್ಪ

08:52 AM Feb 08, 2022 | Team Udayavani |

ಮೈಸೂರು: ಇನ್ನು ಮೂರು ತಿಂಗಳು ಸಚಿವ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪವಿಲ್ಲ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಇಲ್ಲ. ಈ ಬಗ್ಗೆ ಖುದ್ದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಇದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಯಾರು ಹೈಕಮಾಂಡ್ ನಾಯಕರು ಹೇಳಿಲ್ಲ. ಮಾಧ್ಯಮಗಳಲ್ಲಿ ಬಂದಿರುವದನ್ನು ಓದಿದ್ದೇನೆ. ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ.ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎನ್ನುವುದನ್ನು ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದರು.

ಇದನ್ನೂ ಓದಿ:ಹಿಜಾಬ್‌ಧಾರಿಗಳಿಗೆ ಪ್ರತ್ಯೇಕ ಕೊಠಡಿ ಕೇಸರಿ ಶಾಲಿಗೂ ಪ್ರವೇಶ ಇಲ್ಲ

ರಾಜ್ಯದಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯ ತಾನು ಎರಡನೇ ಅಂಬೇಡ್ಕರ್ ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಸಂವಿಧಾನ ಕಾನೂನು ಗೊತ್ತಿಲ್ಲವೆ? ಸಿಎಂ ಆಗಿದ್ದವರಿಗೆ ನ್ಯಾಯಾಲಯದ ಆದೇಶ ಕಾನೂನು ಗೊತ್ತಿಲ್ಲವೆ? ಕೇರಳದ ಹೈ ಕೋರ್ಟ್ ಏನು ಹೇಳಿದೆ ಎಂದು ಸಿದ್ದರಾಮಯ್ಯ ಓದಿಕೊಳ್ಳಲಿ. ಸರ್ಕಾರದ ಆದೇಶ ಮಾಡಿದೆ ಈ ಬಗ್ಗೆ ಕಾಂಗ್ರೆಸ್ ನಿಲುವ ಸ್ಪಷ್ಟನೆ ಮಾಡಿ. ಕಾನೂನು ಪಾಲನೆ ಮಾಡಬೇಕೋ ಬೇಡವೋ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next