Advertisement

ಸಂಪುಟ ವಿಸ್ತರಣೆ ಇಲ್ಲ, ಅಭ್ಯರ್ಥಿಯ ಹೆಸರು ಈಗ ಘೋಷಿಸುವುದಿಲ್ಲ 

10:53 AM Jan 25, 2017 | Team Udayavani |

ಮೈಸೂರು: ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದಿಲ್ಲ, ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯ ಹೆಸರು ಚುನಾವಣಾ ದಿನಾಂಕ ಘೋಷಣೆಯಾದ ಬಳಿಕವೆ ಘೋಷಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. 

Advertisement

ಸುದ್ದಿಗಾರರು ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ನೂರಾರು ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ಕೈಗಾರಿಕೆ ಸಚಿವ ರಮೇಶ್‌ ಜಾರಕಿಹೊಳಿ ತಲೆದಂಡ ನೀಡುತ್ತೀರಾ ಎಂದು ಕೇಳಿದಾಗ ‘ಈ ಬಗ್ಗೆ ವರದಿ ತರಿಸಿಕೊಂಡು ಪರಿಶೀಲಿಸಿ ಆ ಬಳಿಕ ನಿರ್ಧರಿಸುತ್ತೇನೆ’ ಎಂದರು. 

ನನಗೆ ಐಟಿ ಅಧಿಕಾರಿಗಳು ವರದಿ ನೀಡಿಲ್ಲ, ಕೇವಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೂ ವರದಿ ತರಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next