Advertisement

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

01:08 AM Nov 30, 2024 | Team Udayavani |

ಬೆಂಗಳೂರು: ಸಚಿವ ಸಂಪುಟ ಸೇರುವ ಕನಸು ಕಂಡಿದ್ದ ಕಾಂಗ್ರೆಸ್‌ನ ಹಲವು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಾಕ್‌ ನೀಡಿದ್ದು, ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ ಎಂದಿದ್ದಾರೆ.

Advertisement

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿ. ನಾಗೇಂದ್ರರನ್ನು ಸಂಪುಟಕ್ಕೆ ಮತ್ತೆ ಸೇರಿಸಿ ಕೊಳ್ಳುವ ಕಸರತ್ತು ನಡೆಯುತ್ತಿದೆ ಎಂಬ ಗುಸುಗುಸು ಕೇಳಿಬಂದ ಬೆನ್ನಲ್ಲೇ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಆದರೆ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಯಾವುದೇ ಚರ್ಚೆಗಳು ನಡೆಯದ ಹಿನ್ನೆಲೆಯಲ್ಲಿ ಸದ್ಯಕ್ಕೆ ತಡೆ ಬಿದ್ದಿದೆ.

ಹೈಕಮಾಂಡ್‌ ಎದುರು ಚರ್ಚೆಯೇ ಆಗಿಲ್ಲ
ದಿಲ್ಲಿ ಭೇಟಿ ಸಂದರ್ಭ ಸಿದ್ದರಾಮಯ್ಯ ಅವರಾಗಲಿ ಡಿ.ಕೆ. ಶಿವಕುಮಾರ್‌ ಅವರಾಗಲಿ ಈ ಕುರಿತು ಹೈಕಮಾಂಡ್‌ ಜತೆ ಚರ್ಚೆ ನಡೆಸಿಯೇ ಇಲ್ಲ. ಇದನ್ನು ಸ್ವತಃ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಡಿ. 9ಕ್ಕೆ ಅಧಿವೇಶನ ಆರಂಭವಾಗಲಿರುವುದರಿಂದ ಸದ್ಯಕ್ಕೆ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಇದು ಸಕಾಲವಲ್ಲವೆಂದು ಇಬ್ಬರು ತೀರ್ಮಾನಕ್ಕೆ ಬಂದಂತಿದೆ.

ನಮ್ಮಲ್ಲೇ ಮೊದಲು
ಸಂಪುಟ ಪುನಾರಚನೆಗೆ ಸಿಎಂ ನಿರಾಸಕ್ತಿ ತೋರಿದ್ದಾರೆ ಎಂದು “ಉದಯವಾಣಿ’ ಗುರುವಾರವೇ (ನ. 28) ವರದಿ ಮಾಡಿತ್ತು.

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸದ್ಯಕ್ಕಿಲ್ಲ. ನಾಗೇಂದ್ರ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಈಗಲೇ ಅಲ್ಲ.
-ಸಿದ್ದರಾಮಯ್ಯ, ಸಿಎಂ

Advertisement

ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನು ತುಂಬುವ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ನಡೆದಿಲ್ಲ.
– ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next