Advertisement
ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿ. ನಾಗೇಂದ್ರರನ್ನು ಸಂಪುಟಕ್ಕೆ ಮತ್ತೆ ಸೇರಿಸಿ ಕೊಳ್ಳುವ ಕಸರತ್ತು ನಡೆಯುತ್ತಿದೆ ಎಂಬ ಗುಸುಗುಸು ಕೇಳಿಬಂದ ಬೆನ್ನಲ್ಲೇ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಆದರೆ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಯಾವುದೇ ಚರ್ಚೆಗಳು ನಡೆಯದ ಹಿನ್ನೆಲೆಯಲ್ಲಿ ಸದ್ಯಕ್ಕೆ ತಡೆ ಬಿದ್ದಿದೆ.
ದಿಲ್ಲಿ ಭೇಟಿ ಸಂದರ್ಭ ಸಿದ್ದರಾಮಯ್ಯ ಅವರಾಗಲಿ ಡಿ.ಕೆ. ಶಿವಕುಮಾರ್ ಅವರಾಗಲಿ ಈ ಕುರಿತು ಹೈಕಮಾಂಡ್ ಜತೆ ಚರ್ಚೆ ನಡೆಸಿಯೇ ಇಲ್ಲ. ಇದನ್ನು ಸ್ವತಃ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಡಿ. 9ಕ್ಕೆ ಅಧಿವೇಶನ ಆರಂಭವಾಗಲಿರುವುದರಿಂದ ಸದ್ಯಕ್ಕೆ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಇದು ಸಕಾಲವಲ್ಲವೆಂದು ಇಬ್ಬರು ತೀರ್ಮಾನಕ್ಕೆ ಬಂದಂತಿದೆ. ನಮ್ಮಲ್ಲೇ ಮೊದಲು
ಸಂಪುಟ ಪುನಾರಚನೆಗೆ ಸಿಎಂ ನಿರಾಸಕ್ತಿ ತೋರಿದ್ದಾರೆ ಎಂದು “ಉದಯವಾಣಿ’ ಗುರುವಾರವೇ (ನ. 28) ವರದಿ ಮಾಡಿತ್ತು.
Related Articles
-ಸಿದ್ದರಾಮಯ್ಯ, ಸಿಎಂ
Advertisement
ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಒಂದು ಸಚಿವ ಸ್ಥಾನ ಖಾಲಿ ಇದ್ದು, ಅದನ್ನು ತುಂಬುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ.– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ