ಪುಣೆ: ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧ್ಯಯನಕ್ಕೆ ತಂಡ ಬಂದಿಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿದ್ದಾರೆ.
ಕರಾಡ್‌ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಾಕೃತಿಕ ವಿಕೋಪ ಸ್ಥಿತಿಗೆ ತುತ್ತಾಗಿರುವ ರಾಜ್ಯದ ಜನರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಅಧ್ಯಯನ ತಂಡ ಕಳುಹಿಸುವಂತೆ ಮುಖ್ಯಮಂತ್ರಿ, ಪುನರ್ವಸತಿ ಖಾತೆ ಸಚಿವರು, ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿಯನ್ನು ಮನದಟ್ಟು ಮಾಡುವ ಯತ್ನದ ಭಾಗವಾಗಿ ಪತ್ರ ಬರೆದಿದ್ದರು. ಅದರ ಹೊರತಾಗಿಯೂ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಇನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಹೆಸರು
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಸ್ತಿತ್ವದಲ್ಲಿದ್ದ ವೇಳೆ ಮಹಾರಾಷ್ಟ್ರದಲ್ಲಿ ಮಳೆ ಮತ್ತು ಇತರ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಕೂಡಲೇ ಅಧ್ಯಯನ ತಂಡ ಕಳುಹಿಸುತ್ತಿತ್ತು ಎಂದು ನೆನಪು ಮಾಡಿಕೊಂಡರು.
ವಿಪತ್ತುಗಳ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪಕ್ಷ, ಸಿದ್ಧಾಂತ ಗಮನಿಸಬಾರದು ಎಂದು ಡಿಸಿಎಂ ಅಜಿತ್ ಪವಾರ್ ಪ್ರತಿಪಾದಿಸಿದ್ದಾರೆ. ಇದರ ಜತೆಗೆ ಕೇಂದ್ರದಿಂದ ಜಿಎಸ್‌ಟಿ ಪರಿಹಾರ ಮೊತ್ತವಾಗಿ 29 ಸಾವಿರ ಕೋಟಿ ಬರಬೇಕಿದೆ ಎಂದರು.