Advertisement

ರಾಜ್ಯಸಭೆ ಚುನಾವಣೇಲಿ ಅಹ್ಮದ್ ಪಟೇಲ್ ಗೆಲುವು ತುಂಬಾ ಕಷ್ಟ; ಪಟೇಲ್

02:52 PM Jul 29, 2017 | Sharanya Alva |

ಅಹ್ಮದಾಬಾದ್: ರಾಜ್ಯಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಗುಜರಾತ್ ನಲ್ಲಿ ಆರು ಮಂದಿ ಶಾಸಕರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವು ಕಷ್ಟ ಎಂದು ಪಕ್ಷದ ಶಾಸಕರೊಬ್ಬರು ಭವಿಷ್ಯ ನುಡಿದಿದ್ದು, ಇನ್ನಷ್ಟು ಶಾಸಕರು ಕಾಂಗ್ರೆಸ್ ಗೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದ್ದಾರೆ.

Advertisement

ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ತೊರೆದಿರುವ ಶಂಕರ್ ಸಿಂಗ್ ವಘೇಲಾ ಅವರ ಆಪ್ತರಾಗಿರುವ ಕಾಂಗ್ರೆಸ್ ಶಾಸಕ ರಾಘವಜೀ ಪಟೇಲ್ ಕೂಡಾ ರಾಜೀನಾಮೆ ನೀಡುವ ಸೂಚನೆ ನೀಡಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಆಗಸ್ಟ್ 8ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಹ್ಮದ್ ಪಟೇಲ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಸ್ತುತ ರಾಜಕೀಯ ಬೆಳವಣಿಗೆಗೆ ರಾಜ್ಯದ ನಾಯಕತ್ವ ಮತ್ತು ಕಾಂಗ್ರೆಸ್ ಹೈಮಾಂಡ್ ಹೊಣೆಯಾಗಿದೆ. ಮುಂದಿನ ದಿನಗಳಲ್ಲಿ 20 ಶಾಸಕರು ಕಾಂಗ್ರೆಸ್ ಶಾಸಕರು ಮಾತ್ರ ಗುರುತಿಸಿಕೊಳ್ಳಲಿದ್ದಾರೆ, ಹೀಗಾಗಿ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಅಸಾಧ್ಯವಾಗಲಿದೆ ಎಂದು ಮಾಧ್ಯಮದವರ ಜೊತೆ ಮಾತನಾಡುತ್ತ ಪಟೇಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next