Advertisement

ರಾಷ್ಟ್ರಪತಿ ಕಾರ್ಯಕ್ರಮ ವೇದಿಕೆಯಲ್ಲಿ ಶೆಟ್ಟರ್ ಗಿಲ್ಲ ಅವಕಾಶ?: ಗೊಂದಲಕ್ಕೆ ತೆರೆ

12:10 PM Sep 26, 2022 | Team Udayavani |

ಹುಬ್ಬಳ್ಳಿ; ಇಲ್ಲಿನ ದೇಶಪಾಂಡೆ ನಗರದ ಜಿಮಖಾನ ಮೈದಾನದಲ್ಲಿ ಇಂದು ನಡೆಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮದ ವೇದಿಕೆ ಮೇಲೆ ಶಾಸಕ ಜಗದೀಶ ಶೆಟ್ಟರ್ ಸೇರಿದಂತೆ ನಾಲ್ವರು ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ.

Advertisement

ಈ ಮೊದಲು ರಾಷ್ಟ್ರಪತಿ ಸೇರಿದಂತೆ ಒಂಬತ್ತು ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಸ್ಥಳೀಯ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಅವಕಾಶ ನೀಡಿಲ್ಲ ಎನ್ನುವ ಇರುಸುಮುರುಸು ಶುರುವಾಗಿತ್ತು. ಅವರ ಕೆಲ ಬೆಂಬಲಿಗರು ಅಸಮಧಾನ ವ್ಯಕ್ತಪಡಿಸಿದ್ದರು. ಇದೀಗ ಶೆಟ್ಟರ ಸೇರಿದಂತೆ, ಅರವಿಂದ ಬೆಲ್ಲದ, ಅಮೃತ ದೇಸಾಯಿ ಮತ್ತು ಪ್ರಸಾದ ಅಬ್ಬಯ್ಯ ಅವರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿವೆ.

ಇದನ್ನೂ ಓದಿ:ಅರಂತೋಡು: ಆಟೋರಿಕ್ಷಾ-ಬೈಕ್ ಮಧ್ಯೆ ಅಪಘಾತ ಐಟಿಐ ವಿದ್ಯಾರ್ಥಿ ಮೃತ್ಯು; ಇನ್ನೋರ್ವ ಗಂಭೀರ

ಆರಂಭದಲ್ಲಿ ರಾಷ್ಟ್ರಪತಿಗಳ ಶಿಷ್ಟಾಚಾರದ ಪ್ರಕಾರ ರಾಷ್ಟ್ರಪತಿ ಸೇರಿದಂತೆ ಐವರಿಗೆ ಮಾತ್ರ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗಿತ್ತು. ನಂತರ ಮೂವರು ಸಚಿವರನ್ನು ಸೇರಿಸಲಾಯಿತು. ಆದರೆ ಪಾಲಿಕೆ ವ್ಯಾಪ್ತಿಯ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಸೇರಿದಂತೆ 13 ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next