Advertisement

Hassan ಟಿಕೆಟ್‌ ನಿಲುವಿನಲ್ಲಿ ಬದಲಾವಣೆ ಇಲ್ಲ: HDK

08:05 PM Apr 07, 2023 | Team Udayavani |

ಚಿಕ್ಕಮಗಳೂರು: ಹಾಸನ ಟಿಕೆಟ್‌ ವಿಚಾರವಾಗಿ ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ನಿಷ್ಠಾವಂತ ಕಾರ್ಯಕರ್ತರಿಗೇ ಟಿಕೆಟ್‌ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಕಡೂರಿನಲ್ಲಿ ಜೆಡಿಎಸ್‌ನಿಂದ ಆಯೋಜಿಸಿದ್ದ ಪಂಚರತ್ನ ಯಾತ್ರೆ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಹಾಸನ ಕ್ಷೇತ್ರದ ಟಿಕೆಟ್‌ ನೀಡುವ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುವುದು ಎನ್ನುವ ಮೂಲಕ ಭವಾನಿ ರೇವಣ್ಣ ಸ್ಪರ್ಧೆಯ ಗೊಂದಲಕ್ಕೆ ತೆರೆ ಎಳೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next