ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಈಗಲೂ ಕೋಮಾ ಸ್ಥಿತಿಯಲ್ಲಿದ್ದಾರೆಂದು ದೆಹಲಿಯ ಆರ್ಮಿ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆ, ಹೆಲ್ತ್ ಬುಲೆಟಿನ್ನಲ್ಲಿ ವಿವರಿಸಿದೆ
84 ವರ್ಷ ವಯಸ್ಸಿನ ಪ್ರಣಬ್ ಮುಖರ್ಜಿ ಕೋಮಾಗೆ ಜಾರಿದ್ದು, ಇದುವರೆಗೂ ಅವರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅವರು ಆಳವಾದ ಕೋಮಾದಲ್ಲಿದ್ದು ವೆಂಟಿಲೇಟರ್ ಸಹಾಯದಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಪ್ರಣಬ್ ಮುಖರ್ಜಿಯವರಿಗೆ ಕೋವಿಡ್ ದೃಢಪಟ್ಟು ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಆ.10ರಂದು ದೆಹಲಿಯ ಕಂಟೋನ್ಮೆಂಟ್‌ನ ಆರ್ಮಿ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಕೂಡ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ.
ಸದ್ಯ ಕೋಮಾಕ್ಕೆ ಜಾರಿರುವ ಅವರ ಸ್ಥಿತಿಯಲ್ಲಿ ಸ್ವಲ್ಪವೂ ಬದಲಾವಣೆ ಕಂಡು ಬಂದಿಲ್ಲ. ವೆಂಟಿಲೇಟರ್ ಸಹಾಯದಲ್ಲಿ ಊಸಿರಾಡುತ್ತಿದ್ದಾರೆ.
ಪ್ರಣಬ್ ಮುಖರ್ಜಿ ಅವರು 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.