Advertisement
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಯಾವುದೇ ನಿಯಮಗಳನ್ನು ತಂದಿಲ್ಲ. ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ. ಏ.೨೦ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಹೇಳಿದರು.
Related Articles
Advertisement
ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಮದುವೆ, ಅಪಾರ್ಟ್‌ಮೆಂಟ್ ಎಲ್ಲವೂ ತೆಗೆದರೆ ಹೇಗೆ? ಗಂಭೀರವಾದ ಕ್ರಮ ಕೈಗೊಂಡಿಲ್ಲ ಎಂದು ವರದಿಗಳು ಬರುತ್ತಿತ್ತು. ಈಗ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ ಎಂದು ಹೇಳಿದರು.
ಚುನಾವಣೆಗೂ ಮಾರ್ಗಸೂಚಿ ಅನ್ವಯವಾಗಲಿದೆ. ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆಯಿಲ್ಲ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ಮತ್ತೆ ಆತಂಕದಲ್ಲಿ ಕನ್ನಡ ಚಿತ್ರರಂಗ: ಸಿನಿಮಾ ಬಿಡುಗಡೆಯಲ್ಲಿ ಆಗಲಿದೆ ವ್ಯತ್ಯಯ
ಬಸ್ ಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನ ಕರೆದೊಯ್ಯವಂತಿಲ್ಲ. ಎಷ್ಟು ಆಸನದ ಸಾಮರ್ಥ್ಯ ಇದೆಯೋ ಅಷ್ಟು ಜನರನ್ನ ಮಾತ್ರ ಕರೆದೊಯ್ಯಬೇಕು. ಈ ಬಗ್ಗೆ ನಿನ್ನೆಯೇ ಚರ್ಚಿಸಲಾಗಿದೆ ಎಂದರು.
ನೈಟ್ ಕರ್ಫ್ಯೂ, ವಾರಾಂತ್ಯದ ಲಾಕ್ ಡೌನ್ ಬಗ್ಗೆ ಗೊತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಬಂದರೆ ಮತ್ತೆ ಎಲ್ಲದಕ್ಕೂ ಅವಕಾಶ ಮಾಡಿಕೊಡಲಾಗುವುದು. ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಸುಧಾಕರ್ ಹೇಳಿದರು.