Advertisement
ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ರೈಲ್ವೆ ಇಲಾಖೆ ಅಧಿಕಾರಿಗಳು ರೈಲಿನಲ್ಲಿ ರಾತ್ರಿ ವೇಳೆ ಪ್ರಯಾಣಿಕರು ಮೊಬೈಲ್ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜಿಗೆ ಹಾಕಿ ನಿದ್ರಿಸುವುದರಿಂದ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ನಿರ್ಧಾರ ವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
Related Articles
Advertisement
2014 ರಲ್ಲಿ ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ನಂತರ, ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಚಾರ್ಜಿಂಗ್ ಸೇವೆಗಳನ್ನು ಸ್ವಿಚ್ ಆಫ್ ಮಾಡಲು ರೈಲ್ವೆ ಸುರಕ್ಷತಾ ಆಯುಕ್ತರು ಶಿಫಾರಸು ಮಾಡಿದ್ದರು. ಇದಾದ ಬಳಿಕ ಇತ್ತೀಚಿನ ದಿನಗಳಲ್ಲಿಯೂ ಇಂತಹ ಅಗ್ನಿ ಅವಘಡಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರೈಲ್ವೆ ಮಂಡಳಿ ಅಂತಿಮವಾಗಿ ಎಲ್ಲಾ ರೈಲು ವಲಯಗಳಿಗೆ ಈ ಆದೇಶಗಳನ್ನು ನೀಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಈಶ್ವರಪ್ಪ ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ ಕಿಡಿ
ಈ ನಡುವೆ ರೈಲಿನ ಒಳಗೆ ಧೂಮಪಾನ ಮಾಡುವವರಿಗೆ ರೈಲ್ವೆ ಕಾಯ್ದೆಯ ಸೆಕ್ಷನ್ 167 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಧೂಮಪಾನ ಮಾಡುವ ಪ್ರಯಾಣಿಕರಿಗೆ 100 ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಲ್ಲದೇ ರೈಲುಗಳಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯ ಸೆಕ್ಷನ್ 164 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಪರಾಧಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ಅಥವಾ ದಂಡ ವಿಧಿಸಬಹುದು ಮತ್ತು ಸೆಕ್ಷನ್ 165 ರ ಅಡಿಯಲ್ಲಿ 500 ರೂ.ಗಳ ದಂಡವನ್ನು ವಿಧಿಸಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.