ಗದಗ: ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾ. 3ರಿಂದ 6ರ ವರೆಗೆ ಜಿಲ್ಲಾದ್ಯಂತ ಜರುಗಲಿದೆ. ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಕಟ್ಟುನಿಟ್ಟಾಗಿ ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
Advertisement
ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅನುಷ್ಠಾನದ ಕುರಿತು ಮಂಗಳವಾರ ಜರುಗಿದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಚ್ಚಾಗಿರುವುದರಿಂದ ಎಲ್ಲಾ ಪ್ರದೇಶಗಳನ್ನು ಸಮೀಕ್ಷೆ ಮಾಡಿ ಸೂಕ್ಷ್ಮ ಕ್ರಿಯಾ ಯೋಜನೆ ತಯಾರಿಸಲು ಎಲ್ಲಾ ತಾಲೂಕು ವೈದ್ಯಾಧಿ ಕಾರಿಗೆ ತಿಳಿಸಿದರು. ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಡ್ಡಾಯವಾಗಿ ಭೇಟಿ ನೀಡಿ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತರಾಗದಂತೆ
ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ 3 ಹಂತದಲ್ಲಿ ಕಟ್ಟುನಿಟ್ಟಾಗಿ ನಡೆಸಲು ಮತ್ತು ಸೂಕ್ಷ್ಮ
ಪ್ರದೇಶದಲ್ಲಿ ಅತೀ ಜಾಗರೂಕತೆಯಿಂದ ಪಾಲಕರನ್ನು ಮನವೊಲಿಸಿ ಲಸಿಕೆ ನೀಡಲು ಸೂಚಿಸಿದರು. ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ಮೇಲ್ವಿಚಾರಕರು ಕಡ್ಡಾಯವಾಗಿ ಕ್ಷೇತ್ರಗಳಿಗೆ ಭೇಟಿ ನೀಡಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
Related Articles
2011ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ. ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಪೋಲಿಯೋ ನಿರ್ಮೂಲನೆ ಪ್ರಮಾಣ ಪತ್ರ 2014ರಲ್ಲಿ ಪಡೆದಿದೆ ಎಂದರು.
Advertisement
2016ರ ಫೆ. 16ಕ್ಕೆ ಕೇವಲ 2 ದೇಶಗಳಾದ ಪಾಕಿಸ್ತಾನ್, ಆಫ್ಘಾನಿಸ್ತಾನ್‌ನಲ್ಲಿ ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ. ಈ ಹಿನ್ನೆಲೆಯಲ್ಲಿ ನಮ್ಮ ನೆರೆ-ಹೊರೆಯ ರಾಷ್ಟ್ರಗಳಾಗಿರುವುದರಿಂದ ವಲಸೆಯಿಂದ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಇರುವುದರಿಂದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಕೇವಲ ಒಂದೇ ಸುತ್ತಿನಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಹಾಗೂ ಎಎಫ್‌ಪಿ ಸರ್ವೇಕ್ಷಣೆ ಕಾರ್ಯಕ್ರಮಗಳನ್ನು ಅತ್ಯಂತ ಜಾಗರೂಕತೆಯಿಂದ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಸ್.ಎಸ್. ನೀಲಗುಂದ, ಆರ್‌ಸಿಎಚ್‌ಒ ಡಾ| ಮೀನಾಕ್ಷಿ ಕೆ.ಎಸ್., ಜಿಲ್ಲೆ ಎಲ್ಲಾ ಅನುಷ್ಠಾನಾಧಿಕಾರಿಗಳು, ಸಮುದಾಯ ಔಷಧಿ ಅಧಿಕಾರಿ, ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.