Advertisement
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಲಾಕ್‌ಡೌನ್ ಮಾಡುವುದಿಲ್ಲ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮವನ್ನು ಮತ್ತೆ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಹೀಗಾಗಿ ಬಂದ್ ಮಾಡುವುದಿಲ್ಲ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಸಂಬಂಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
Related Articles
Advertisement
ಸಭೆಯಲ್ಲಿ ಶಾಸಕ ಎಲ್.ನಾಗೇಂದ್ರ, ಜಿಪಂಅಧ್ಯಕ್ಷೆ ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮಸೋಮಶೇಖರ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಅಪರಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ,ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಮೈಮುಲ್‌ನಲ್ಲಿ ಅವ್ಯವಹಾರ ನಡೆದಿಲ್ಲ :
ಮೈಮುಲ್‌ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ನೇಮಕಾತಿ ಪತ್ರವನ್ನು ಹೈಕೋರ್ಟ್ ನಿರ್ದೇಶನದಂತೆ ನೀಡಲಾಗಿದ್ದು, ಪಾರದರ್ಶಕವಾಗಿ ನಡೆದಿದೆ.ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಬಳಿಕ ಎಲ್ಲ ಪ್ರಕ್ರಿಯೆಮುಗಿದಿದೆ. ನನ್ನ ಗಮನಕ್ಕೆ ಬಂದೇ ಎಲ್ಲವೂ ನಡೆದಿದ್ದು, ಮೈಮುಲ್ ನಿರ್ದೇಶಕ ಎಸ್.ಸಿ.ಅಶೋಕ್ ಪಾತ್ರವಿದೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಸಚಿವ ಸೋಮಶೇಖರ್ ತಿಳಿಸದರು. ಬಿ.ವೈ.ವಿಜಯೇಂದ್ರ ಮೈಸೂರು ಜಿಲ್ಲೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಕಾರಣಕ್ಕಾಗಿ ಕೆಲವರಲ್ಲಿ ನಾಡಿಮಿಡಿತ ಶುರುವಾಗಿದೆ. ಭಯ ಬಂದಿದೆ. ಅದಕ್ಕಾಗಿ ಇಂತಹ ಸುಳ್ಳು ಹೇಳುತ್ತಿದ್ದಾರೆ. ಹುಣಸೂರು ಕ್ಷೇತ್ರದಶಾಸಕರು ಸುಮ್ಮನೇ ಮಾತನಾಡುತ್ತಾರೆ. ಅವರಿಗೆ ಉತ್ತರ ಕೊಡಲು ಆಗಲ್ಲ. ಅವರೇನು ಮಂತ್ರಿಯೇ ಉತ್ತರ ಕೊಡಲು ಎಂದು ಕಿಡಿಕಾರಿದರು.
ಹಬ್ಬ ಜಾತ್ರೆಗೆ 50ಕ್ಕಿಂತ ಹೆಚ್ಚಿನ ಜನ ಬೇಡ : ಜಾತ್ರೆ, ಊರ ಹಬ್ಬಗಳನ್ನು ನಿಷೇಧಿಸಿದರೆ ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ನಾವು 50 ಜನರಿಗೆಅನುಮತಿ ನೀಡಿ ಹಬ್ಬ ನಡೆಯುವಂತೆ ಮಾಡಬೇಕು. ಜನರು ಸೇರದಂತೆಯೂ ನೋಡಿಕೊಳ್ಳಬೇಕು. 50ಜನಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳುವುದಕ್ಕೆಸ್ಥಳೀಯ ಮುಖಂಡರಿಂದ ಮುಚ್ಚಳಿಕೆ ಪತ್ರ ಪಡೆದುಬಳಿಕ ಅನುಮತಿ ನೀಡಿ ಎಂದು ಉಸ್ತುವಾರಿ ಸಚಿವ ಎಸ್ .ಟಿ. ಸೋಮಶೇಖರ್ ತಿಳಿಸಿದರು.
ಊಟಿಯಂತೆ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಲ್ಲಬೇಕು: ಸಚಿವ ಮನವಿ :
ಮೈಸೂರು: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಏ.5ರಿಂದ ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತಿದ್ದು, ಪ್ಯಾಕ್ ಮಾಡಿದ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆಯೂ ನಿಲ್ಲಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾ ಪಂಚಾಯತಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು ಪ್ಲಾಸ್ಟಿಕ್‌ಬ್ಯಾಗುಗಳಿಗೆ ಪರ್ಯಾಯವಾಗಿ ಬಟ್ಟೆ ಬ್ಯಾಗ್‌ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಊಟಿಯಲ್ಲಿ ಪ್ಯಾಕ್ ಮಾಡಿದ ನೀರು ಗಾಜಿನ ಬಾಟಲಿನಲ್ಲಿಸಿಗುತ್ತದೆ. ಮೈಸೂರಿನಲ್ಲೂ ಅಂತಹ ಪದ್ಧತಿ ಬರಬೇಕು. ಇದರಿಂದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗಲಿದೆ ಎಂದು ಹೇಳಿದರು