ಸೊರಬ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪ ತನಿಖೆಯ ಹಾದಿಯಲ್ಲಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಗುರುವಾರ ತಾಲೂಕಿನ ಉದ್ರಿ ಗ್ರಾಮದಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುವರು. ಆದರೆ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣುಚಿಕೊಂಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ
ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.
“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ’ಎಂದು ಬರೆದಿರುವ “ಡೆತ್ ನೋಟ್’ಒಂದು ವೈರಲ್ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಸಂತೋಷ್ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು.