Advertisement

ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ

06:11 AM Jun 05, 2020 | Suhan S |

ಗುಳೇದಗುಡ್ಡ: ವರ್ಷದ ಹಿಂದೆಯೇ ಕಾಮಗಾರಿ ಆರಂಭವಾಗಬೇಕಿತ್ತು. ಕೆಲವು ತೊಡಕುಗಳು ಇದ್ದ ಕಾರಣ ಹಾಗೂ ಕೋವಿಡ್ ಬಂದಿದ್ದರಿಂದ ಕಾಮಗಾರಿ ವಿಳಂಬವಾಗಿದೆ. ಆರು ತಿಂಗಳಲ್ಲಿ ಈ ರಸ್ತೆ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲದಿದ್ದರೆ ದಂಡ ವಿಧಿ ಸಲಾಗುವುದು ಎಂದು ಗುತ್ತಿಗೆದಾರರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಪಟ್ಟಣದ ಹಾದಿಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ 35 ಕೋಟಿ ವೆಚ್ಚದ ಸಂಕೇಶ್ವರ ಸಂಗಮ ಹೆದ್ದಾರಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ಗುಳೇದಗುಡ್ಡದ ಸೌಂದರೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಸುಮಾರು 14 ಕಿ.ಮೀ. ರಸ್ತೆ ನಿರ್ಮಿಸಲಾಗುವುದು. ಇದು ಸುಮಾರು 14 ಮೀ. ಅಗಲವಿದ್ದು, ಮಧ್ಯದಲ್ಲಿ ಡಿವೈಡರ್‌ ಹಾಕಿ ಲೈಟ್‌ ಅಳವಡಿಸಲಾಗುವುದು. ಗುಳೇದಗುಡ್ಡ ವ್ಯಾಪ್ತಿಯಲ್ಲಿ 3 ಕಿ.ಮೀ. ಕಾಂಕ್ರೀಟ್‌ ರಸ್ತೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್‌.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಜು ಜವಳಿ, ಹೊಳಬಸು ಶೆಟ್ಟರ, ಸಂಜಯ ಬರಗುಂಡಿ, ಮಹೇಶ ಹೊಸಗೌಡರ, ಭೀಮಸೇನ್‌ ಚಿಮ್ಮನಕಟ್ಟಿ, ಡಾ| ಬಸವರಾಜ ಕೋಲಾರ, ಗೋಪಾಲ ಭಟ್ಟಡ, ಚಿದಾನಂದಸಾ ಕಾಟವಾ, ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಅಂಗಡಿ, ಸಿ.ಎಸ್‌. ಮಠಪತಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next