Advertisement

ಮೊಬೈಲ್‌ ಆ್ಯಪ್‌ ಪಾಸ್‌ಪೋರ್ಟ್‌ಗೆ ಭದ್ರತೆ

06:00 AM Jul 20, 2018 | Team Udayavani |

ನವದೆಹಲಿ: ಮೊಬೈಲ್‌ ಆ್ಯಪ್‌ ಮೂಲಕ ಪಾಸ್‌ಪೋರ್ಟ್‌ ನೀಡುವ ವ್ಯವಸ್ಥೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ರಾಜಿ ಆಗುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ. ಸಂಸತ್‌ ಕಲಾಪದಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಎಲ್ಲ ರೀತಿಯ ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಸೈಬರ್‌ ಸೆಂಟರ್‌ ಅಥವಾ ಮೊಬೈಲ್‌ ಆ್ಯಪ್‌ ಮೂಲಕ ಪಾಸ್‌ಪೋರ್ಟ್‌ ಪಡೆಯಲು ನಕಲಿ ದಾಖಲೆ ಸಲ್ಲಿಸಿದರೆ ಕೂಡಲೇ ಯಾಂತ್ರಿಕವಾಗಿ ಅದು ತಿರಸ್ಕೃತವಾಗುತ್ತದೆ. ಜೂ.26 ರಂದು ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗಿದ್ದು, ಎರಡು ದಿನದಲ್ಲಿ 10 ಲಕ್ಷ ಮಂದಿ ನೋಂದಣಿಯಾಗಿದ್ದಾರೆ. ಇದುವರೆಗೂ 67.5 ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ದೇಶದ ಯಾವುದೇ ಸ್ಥಳದಲ್ಲಿ mPassport Seva App ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. 

Advertisement
Advertisement

Udayavani is now on Telegram. Click here to join our channel and stay updated with the latest news.

Next