Advertisement

ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆಯಿಲ್ಲ: ಅರುಣ್ ಸಿಂಗ್

11:20 AM Aug 31, 2021 | Team Udayavani |

ಮೈಸೂರು: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಈಸ್ ಸಿಂಕಿಂಗ್, ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

Advertisement

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಎಂದರು.

ಬಿ.ಎಸ್.ಯಡಿಯೂರಪ್ಪ ಒಬ್ಬ ದೊಡ್ಡ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ:ಸಾರ್ವಜನಿಕ ಗಣೇಶ ಹಬ್ಬ ವಿಚಾರದಲ್ಲಿ ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ: ಸಿಎಂ

ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ‌ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ. ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ‌ ಎಂದು ಅರುಣ್ ಸಿಂಗ್ ಹೇಳಿದರು.

Advertisement

ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ‌ ಬಗ್ಗೆ ಯಾವುದೇ ಒತ್ತಡ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next