ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ ಎಂದರೆ ಅದು ಬಿಜೆಪಿ ಮಾತ್ರ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಹೋರಾಟದ ಮೂಲಕ ಅಧಿ ಕಾರಕ್ಕೆ ಬಂದಿದೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಸಉತ್ತಮವಾಗಿದೆ. ಅದರ ಪರಿಣಾಮವಾಗಿ ನಾವು ಅವಳಿ ತಾಲೂಕಿನಲ್ಲಿ 30ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಅಧಿಕಾರ ಹಿಡಿಯಲು ಸಾಧ್ಯವಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು, ಮುಖಂಡರು ಹಾಗೂ ಪದಾಧಿ ಕಾರಿಗಳು ಜನರ ಮನೆಬಾಗಿಲಿಗೆ ತಲುಪಿಸಬೇಕು. ಈ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಬೇಕೆಂದು ಕರೆ ನೀಡಿದರು. ವಾಲ್ಮೀಕಿ ಸಮಾಜದ ಸಾಕಷ್ಟು ಶಾಸಕರು ನಮ್ಮ ಸರ್ಕಾರದಲ್ಲಿದ್ದಾರೆ. ಅವರೆಲ್ಲರೂ ಒತ್ತಾಯ ಮಾಡಿದ ಪರಿಣಾಮವಾಗಿ ಮುಖ್ಯಮಂತ್ರಿಗಳು 2009ರಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿಸಿದರು. ಸರ್ವ ಸಮುದಾಯದವರನ್ನು ಸಮಾನವಾಗಿ ಕಾಣುವ ಏಕೈಕ ಪಕ್ಷ ಬಿಜೆಪಿ ಮಾತ್ರ.
ಎಲ್ಲಾ ಸಮುದಾಯದವರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ, ಯುವ ಮೋರ್ಚಾ ಅಧ್ಯಕ್ಷ ವಿಕಾಸ್, ಮುಖಂಡ ಶಾಂತರಾಜ್ ಪಾಟೀಲ್ ಮಾತನಾಡಿದರು.
ಯುವ ಮೋರ್ಚಾ ಉಪಾಧ್ಯಕ್ಷರಾದ ದೇವು ಗೌಡ, ಪುನೀತ್, ಕಾರ್ಯದರ್ಶಿ ಕೋಟೆಮಲ್ಲೂರು ವಿಶ್ವನಾಥ್, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಉಪಾಧ್ಯಕ್ಷ ತಿಮ್ಮೇನಹಳ್ಳಿ ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುಗೇìಶ್, ಅರಕೆರೆ ನಾಗರಾಜ್ ಇದ್ದರು.