ಮೈಸೂರು: ಹಿಜಾಬ್ ಗಲಾಟೆಗೂ ಶಿವಮೊಗ್ಗದ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. 200% ಹೇಳುತ್ತೇನೆ, ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ – ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಮುಂದಿನ ಚುನಾವಣೆವರೆಗೂ ಇಂತಹ ಗಲಾಟೆ ನಡೆಯುತ್ತಿರುತ್ತವೆ. ಕೋಮು ಸೌಹಾರ್ದತೆ ವಿಚಾರದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಮಕ್ಕಳ ಸಾಯಲ್ಲ ಎಂದು ಕಿಡಿಕಾರಿದರು.
ನೀವು ಕಲ್ಲಿನ ಮಕ್ಕಳು: ಮೇಕೆದಾಟು ಎರಡನೇ ಹಂತದ ಪಾದಯಾತ್ರೆ ಈಗ ಯಾಕೆ. ಮಣ್ಣಿನ ಮಕ್ಕಳೆಂದು ಬೋರ್ಡ್ ಹಾಕೊಂಡು ನೀವೇ ಹೋಗಿ, ನಾವೆಂದೂ ಮಣ್ಣಿನ ಮಕ್ಕಳು ಎಂದು ಹೇಳಿಕೊಂಡಿಲ್ಲ. ನಿಮಗೆ ಕಲ್ಲಿನ ಮಕ್ಕಳೆಂದು ಕರೆಯುತ್ತಾರೆ. ಈಗೇನೋ ಮಣ್ಣಿನ ಮಕ್ಕಳು ಅಂತ ಬಿಂಬಿಸಿಕೊಳ್ಳಲು ಹೋಗುತ್ತುದ್ದೀರಿ, ಬೋರ್ಡ್ ಹಾಕಿಕೊಳ್ಳಿ ಎಂದು ಕುಮಾರಸ್ವಾಮಿಯವರು ಡಿಕೆ ಬ್ರದರ್ಸ್‌ಗೆ ಟಾಂಗ್ ಕೊಟ್ಟರು.
ಡಿಕೆಶಿ ಕುತ್ತಿಗೆಗೆ ಬರಲಿದೆ: ದೇವೇಗೌಡರು ಬದುಕಿ ಇರುವವರೆಗೂ ಒಕ್ಕಲಿಗ ಸಮಾಜ ಅವರನ್ನು ಕೈಬಿಡಲ್ಲ. ಡಿಕೆಶಿ ಒಕ್ಕಲಿಗ ಶಾಸಕರನ್ನಾದರೂ ಸೆಳೆಯಲಿ. ಇನ್ಯಾರನ್ನದರೂ ಸೆಳೆಯಲಿ ನಾವು ತಲೆಕೆಡಿಸಿಕೊಳ್ಳಲ್ಲ. ದೇವೇಗೌಡರು ಇರೋವರೆಗೂ ಯಾರೂ ಏನು ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ:ಮದುವೆ ಮುಗಿಸಿ ಮನೆಯತ್ತ ಬರುವಾಗ ನಿಯಂತ್ರಣ ತಪ್ಪಿದ ಬೈಕ್: ಇಬ್ಬರು ಸ್ಥಳದಲ್ಲೇ ಸಾವು
ಒಕ್ಕಲಿಗ ಶಾಸಕರಿಗೆ ಗಾಳ ಹಾಕಿರೋದು ಅವರ ಕುತ್ತಿಗೆಗೆ ಬರಲಿದೆ. ಈ ಸಂಬಂಧ ನಾನು ಯಾವುದೇ ರಿವರ್ಸ್ ಆಪರೇಷನ್ ಮಾಡಲ್ಲ. ನನ್ನ ಸಂಪರ್ಕದಲ್ಲಿ ಯಾವ ಕಾಂಗ್ರೆಸ್ ಶಾಸಕರು, ಮುಖಂಡರೂ ಇಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಬೆಳವಣಿಗೆ ನೋಡಿ ಆ ಪಕ್ಷದವರೇ ಬರುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.