Advertisement

ಮೋದಿ ಸರಕಾರದ ಅವಧಿಯಲ್ಲಿ ಕೇಂದ್ರ ಮಟ್ಟದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ

05:19 PM Aug 16, 2022 | Team Udayavani |

ಮುಂಬಯಿ: ಕಳೆದ ಎಂಟು ವರ್ಷಗಳ ನರೇಂದ್ರ ಮೋದಿ ಸರಕಾರದ ಅವಧಿಯಲ್ಲಿ ಕೇಂದ್ರ ಮಟ್ಟದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಹೇಳಿದ್ದಾರೆ.

Advertisement

ಪುಣೆಯಲ್ಲಿ ಜಿಲ್ಲಾ ಪರಿಷತ್ತಿನ 75 ನೇ ವರ್ಷಾಚರಣೆಯ ಅಂಗವಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೋಶ್ಯಾರಿ, ಜನರ ಬೆಂಬಲದೊಂದಿಗೆ ದೇಶದಲ್ಲಿ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೂಗೆಯಲು ಪ್ರಧಾನಿ ಮೋದಿ ಬಯಸುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನಿ ಸರಕಾರವನ್ನು ಮುನ್ನಡೆಸಿಕೊಂಡು ಎಂಟು ವರ್ಷಗಳಾಗಿವೆ, ನೀವು ಕೇಂದ್ರ ಮಟ್ಟದಲ್ಲಿ ಭ್ರಷ್ಟಾಚಾರದ ಬಗ್ಗೆ ಕೇಳಿದ್ದೀರಾ ಎಂದು ಪ್ರಶ್ನಿಸಿದ ರಾಜ್ಯಪಾಲರು, ಕೆಲವು ರಾಜ್ಯಗಳಲ್ಲಿ ನಾಯಕರು ಲಂಚ ಕೇಳುತ್ತಿದ್ದಾರೆ ಎಂದು ಅಧಿಕಾರಿಗಳು ಲಿಖಿತವಾಗಿ ನೀಡುತ್ತಿರುವುದು ದೇಶದ ದುರದೃಷ್ಟ, ಆದರೆ ಕೇಂದ್ರದ ಯಾವುದೇ ಸಚಿವರು ಅಥವಾ ಪ್ರಧಾನಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ನೀವು ಎಂದಾದರೂ ಕೇಳಿದ್ದೀರಾ ಎಂದು ರಾಜ್ಯಪಾಲರು ಹೇಳಿದರು.

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ವಿರುದ್ಧ ವಾಗ್ಧಾಳಿ ನಡೆಸಿದರು. ಪ್ರಧಾನಿ ಮೋದಿಯವರು ದೇಶದಿಂದ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೂಗೆಯಲು ಬಯಸುತ್ತಿದ್ದಾರೆ ಮತ್ತು ಅದಕ್ಕಾಗಿ ನಾಗರಿಕರ ಬೆಂಬಲದ ಅಗತ್ಯವಿದೆ. ಪಂಚಾಯತ್‌ ರಾಜ್‌ ವ್ಯವಸ್ಥೆಯು ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದು ಕೋಶ್ಯಾರಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next