ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ರೋಸ್ ಅವೆನ್ಯೂ ಕೋರ್ಟ್ ಜುಲೈ 3ರವರೆಗೆ ವಿಸ್ತರಿಸಿದ್ದು, ಇದರಿಂದ ಕೇಜ್ರಿವಾಲ್ ಜೈಲುವಾಸ ಮುಂದುವರಿದಂತಾಗಿದೆ.
ಇದನ್ನೂ ಓದಿ:
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ 100 ಕೋಟಿ ರೂಪಾಯಿ ಲಂಚ ಕೇಳಿರುವುದಕ್ಕೆ ಪುರಾವೆ ಇದ್ದಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ (ಜೂನ್ 19) ರೋಸ್ ಅವೆನ್ಯೂ ಕೋರ್ಟ್ ಗೆ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಲ್ಲಿಸಲಾದ ಆರೋಪಪಟ್ಟಿಯನ್ನು ನ್ಯಾಯಾಲಯ ಪರಿಗಣಿಸಿರುವುದಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ತಿಳಿಸಿದ್ದಾರೆ.
ಮೇಲ್ನೋಟದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಇದೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣ ಎಂಬುದು ಕೋರ್ಟ್ ಪರಿಗಣಿಸಿದೆ. ಸಿಬಿಐ ತನಿಖೆಯಲ್ಲೂ ಕೇಜ್ರಿವಾಲ್ 100 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನ್ನ ಬಹಿರಂಗಪಡಿಸಿದೆ.
ನಾವು ಕೇಜ್ರಿವಾಲ್ ಬಂಧನಕ್ಕೂ ಮೊದಲೇ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದೇವು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರು ತಿಳಿಸಿದ್ದಾರೆ.