Advertisement
ಕೇರಳದಲ್ಲಿ 141 ಮಂದಿಗೆ ಸೋಂಕು ದೃಢವಾಗಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಕೊಲ್ಲಂ ಮಯ್ಯನಾಡ್ ನಿವಾಸಿಯೊಬ್ಬರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 22ಕ್ಕೇರಿದೆ.
Related Articles
ಜಿಲ್ಲೆಯಲ್ಲಿ ಮಂಗಳವಾರ ಮಾಸ್ಕ್ ಧರಿಸದ ಆರೋಪದಲ್ಲಿ 239 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಲಾಕ್‌ಡೌನ್ ಉಲ್ಲಂಘನೆ ಆರೋಪದಲ್ಲಿ 7 ಪ್ರಕರಣಗಳನ್ನು ದಾಖಲಿಸಿ 7 ಮಂದಿಯನ್ನು ಬಂಧಿಸಲಾಗಿದೆ. 3 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
Advertisement
ಕೊಡಗು: ಮತ್ತೆ 2 ಪ್ರಕರಣಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಎರಡು ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಜೂ. 22ರಂದು ಸೋಂಕು ದೃಢಪಟ್ಟಿದ್ದ ಸೋಮವಾರ ಪೇಟೆ ತಾಲೂಕಿನ ಶಿರಂಗಾಲ ಗ್ರಾಮದ ವ್ಯಾಪಾರಿಯ 17 ಮತ್ತು 14 ವರ್ಷದ ಮಕ್ಕಳನ್ನೂ ಸೋಂಕು ಬಾಧಿಸಿದೆ. ಈ ಮಕ್ಕಳು ಕೂಡ ಜೂ. 22ರಂದೇ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು ಪ್ರಕರಣಗಳು 8 ಆಗಿದ್ದು, ಮೂವರು ಗುಣ ಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಐದು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷಿಸಿಕೊಳ್ಳಿ
ಸೋಂಕು ದೃಢಪಟ್ಟಿರುವ ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ವ್ಯಾಪಾರಿಯು ಜೂ. 22ರಂದು ಮುಂಜಾನೆ 3 ಗಂಟೆಯಿಂದ 7 ಗಂಟೆಯವರೆಗೆ ಸೋಮವಾರಪೇಟೆಯ ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಅವಧಿಯಲ್ಲಿ ಮಾರುಕಟ್ಟೆಯಲ್ಲಿದ್ದವರು ಸ್ವಯಂಪ್ರೇರಿತರಾಗಿ ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ತೆರಳಿ ಗಂಟಲ ದ್ರವ ಮಾದರಿ ನೀಡುವಂತೆ ಜಿಲ್ಲಾಡಳಿತ ಕೋರಿದೆ.