Advertisement
ಹೊಸದಾಗಿ 248 ಮಂದಿಯ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 394 ವರದಿ ಸ್ವೀಕೃತಿಗೆ ಬಾಕಿ ಇವೆ. ತೀವ್ರ ಉಸಿರಾಟದ ಸಮಸ್ಯೆಗಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಒಟ್ಟು 21 ಮಂದಿ ಸೋಮವಾರ ದಾಖಲಾಗಿದ್ದಾರೆ. 70 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದ್ದು, 12 ಮಂದಿ ಹೊಸದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 59 ಮಂದಿ ಸುರತ್ಕಲ್ ಎನ್‌ಐಟಿಕೆಯಲ್ಲಿ, 40 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.
ಕೋವಿಡ್ ದೃಢಪಟ್ಟು ವೆನಾÉಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಟ್ವಾಳ ಕಸಬಾ ನಿವಾಸಿ 67 ವರ್ಷದ ವೃದ್ಧೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ಉಳಿದ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಬೋಳೂರಿನಲ್ಲಿ ಮುಂಜಾಗ್ರತೆ
ಮಂಗಳೂರು ನಗರ ವ್ಯಾಪ್ತಿಯ ಬೋಳೂರು ಪರಿಸರದಲ್ಲಿ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬುಧವಾರ ಸಂಜೆಯಿಂದ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಈ ಭಾಗದಲ್ಲಿ ಕೋವಿಡ್ ಸೋಂಕು ಬಾಧಿಸಿರುವ ಕುರಿತು ಜಿಲ್ಲಾಡಳಿತದ ಅಧಿಕೃತ ಘೋಷಣೆ ಹೊರ ಬಿದ್ದಿಲ್ಲ. ಆದರೆ ಕೋವಿಡ್ ಪ್ರಕರಣವೊಂದು ದೃಢಪಟ್ಟಿರುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ವದಂತಿ ಹಬ್ಬಿದೆ.
Related Articles
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಎ. 1ರಿಂದ 22ರ ನಡುವೆ ಕೇರಳ ರಾಜ್ಯ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆ ಗಳ ಒಟ್ಟು 79 ಮಂದಿ ರೋಗಿಗಳು ಚಿಕಿತ್ಸೆ ಪಡೆದು ಬಿಡು ಗಡೆಗೊಂಡಿದ್ದು, ಅವರೆಲ್ಲರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ತೆಗೆಯುವ ಕಾರ್ಯ ನಡೆಯುತ್ತಿದೆ.
Advertisement
ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವೃದ್ಧೆಯರಿಗೆ ಮತ್ತು ಅವರ ಸಂಪರ್ಕದಲ್ಲಿದ್ದ ಒಟ್ಟು ಐವರಿಗೆ ಕೋವಿಡ್ ತಗಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರುವ ಎಲ್ಲರನ್ನೂ ಈಗಾಗಲೇ ಕ್ವಾರಂಟೈನ್ ಮಾಡಿ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ.
ಆಯಾ ಜಿಲ್ಲಾಡಳಿತವು ಈ ರೋಗಿಗಳೊಂದಿಗೆ ಅವರ ಮನೆಯವರನ್ನೂ ಕರೆಸಿ ಆಯಾ ಜಿಲ್ಲೆ, ತಾಲೂಕುಗಳಲ್ಲೇ ಗಂಟಲ ದ್ರವ ಮಾದರಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ತಿಳಿಸಿದ್ದಾರೆ.