ಹೊಸದಿಲ್ಲಿ: ಭಾರತದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಬಗ್ಗೆ ರಾಜಕೀಯ ಪ್ರೇರಿತ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ರಾಷ್ಟ್ರೀಯ ಕಾರ್ಯಪಡೆ ಸದಸ್ಯರೂ ಆಗಿರುವ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ದೊಡ್ಡ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾನ್ಯ ಜನರು ಕೋವಿಡ್ ಲಸಿಕೆಯನ್ನು ಪಡೆಯಲು 2022ರವರೆಗೆ ಕಾಯಲೇಬೇಕಾಗುತ್ತದೆ ಎಂದಿದ್ದಾರೆ.
ಸಿಎನ್‌ಎನ್-ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ ರಂದೀಪ್ ಗುಲೇರಿಯಾ ಈ ಮಾಹಿತಿಯನ್ನು ನೀಡಿದ್ದಾರೆ. ದೇಶದಲ್ಲಿ ಸಾಮಾನ್ಯ ಜನರಿಗೆ ಕೋವಿಡ್ ಲಸಿಕೆ ಸುಲಭದಲ್ಲಿ ಸಿಗುವಂತಾಗಲು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
“ನಮ್ಮ ದೇಶದಲ್ಲಿ ಜನಸಂಖ್ಯೆ ದೊಡ್ಡದಾಗಿದೆ; ಫ್ಲೂ ಲಸಿಕೆಯಂತೆ ಕೋವಿಡ್ ಲಸಿಕೆಯನ್ನು ಮಾರುಕಟ್ಟೆಯಿಂದ ಹೇಗೆ ಖರೀದಿಸಬಹುದು ಮತ್ತು ಅದನ್ನು ತೆಗೆದುಕೊಳ್ಳಬಹುದು ಎಂಬುದನ್ನು ನೋಡಲು ನಮಗೆ ಸಮಯ ಬೇಕು ಎಂದು ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಇದನ್ನೂ ಓದಿ:ತಮಿಳುನಾಡು: ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜು
ಲಸಿಕೆ ಲಭ್ಯವಾದ ನಂತರ ಭಾರತಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಶೀತಲೀಕರಣ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು, ಸಾಕಷ್ಟು ಸಿರಿಂಜ್ ಗಳು, ಸಾಕಷ್ಟು ಸೂಜಿಗಳೊಂದಿಗೆ ಲಸಿಕೆಯನ್ನು ದೇಶದ ದೂರದೂರಿಗೆ ತಡೆರಹಿತ ರೀತಿಯಲ್ಲಿ ತಲುಪಿಸಲು ಸಾಧ್ಯವಾಗುವುದು ದೊಡ್ಡ ಸವಾಲಾಗಿದೆ” ಎಂದು ಹೇಳಿದರು