Advertisement

ಇನ್ನು ಸಿಪಿಐಗಿಲ್ಲ ರಾಷ್ಟ್ರೀಯ ಪಕ್ಷ ಸ್ಥಾನಮಾನ?

01:34 AM May 30, 2019 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಮ್ಯೂನಿಸ್ಟ್‌ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸದ್ಯದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಚುನಾವಣೆಯಲ್ಲಿ ದೇಶಾದ್ಯಂತ ಕೇವಲ 2 ಸೀಟುಗಳಿಗಷ್ಟೇ ಸಿಪಿಐ ತೃಪ್ತಿ ಪಟ್ಟುಕೊಂಡಿತ್ತು. ಬಿಎಸ್‌ಪಿ ಮತ್ತು ಎನ್‌ಸಿಪಿ ಕೂಡ ಇದೇ ಹಾದಿಯಲ್ಲಿ ಸಾಗಿದ್ದು, ಈ ಪಕ್ಷಗಳೂ ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಆತಂಕದಲ್ಲಿವೆ. 2016ರವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳ ಸ್ಥಿತಿಗತಿ ಬಗ್ಗೆ ಪ್ರತಿ 5 ವರ್ಷಗಳಿಗೊಮ್ಮೆ ಪರಿಶೀಲನೆ ನಡೆಯುತ್ತಿತ್ತು. ಆದರೆ, 2016ರಲ್ಲಿ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲು ತೀರ್ಮಾನಿಸಿರುವ ಕಾರಣ ಸ್ವಲ್ಪಮಟ್ಟಿಗೆ ಈ ಪಕ್ಷಗಳು ನಿಟ್ಟುಸಿರು ಬಿಡುವಂತಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next