Advertisement

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗೆ ಗಡುವು ನೀಡಿಲ್ಲ: ಸಿಎಂ ಬೊಮ್ಮಾಯಿ

09:56 PM Dec 16, 2021 | Team Udayavani |

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ  2ಎ ಮೀಸಲಾತಿ ನೀಡುವ ಬಗ್ಗೆ ಗಡುವು ನೀಡಿಲ್ಲ. ಆದರೆ ಸಮಯಬೇಕು ಎನ್ನುವುದು ಅವರಿಗೂ ಗೊತ್ತಾಗಿದೆ.

Advertisement

ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಖಾಸಗಿ ಹೊಟೇಲ್ ನಲ್ಲಿ ಗುರುವಾರ ಕೂಡಲಸಂಗಮ ಸಮಾಜದ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಚರ್ಚಿಸಲಾಗಿದೆ. ಅವರ ಮನಸ್ಸಿನಲ್ಲಿದ್ದ ಹಲವಾರು ವಿಚಾರಗಳನ್ನು ನನಗೆ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಸೇರಿದಂತೆ ಕಾನೂನಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಹೇಳಿದ್ದೇನೆ ಎಂದರು.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವರದಿ ಪಡೆದುಕೊಳ್ಳಲು ಆಗಿಲ್ಲ. ಸಮೀಕ್ಷೆ ನಡೆಸಿ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದುಕೊಳ್ಳಲಾಗುವುದು.‌ ಹಿಂದುಳಿದ ವರ್ಗಗಳ‌ ಶಿಪಾರಸು ಮಾಡಿದ್ದೇವೆ. ಆ ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next