Advertisement

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

01:19 PM Sep 29, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜುಗಳು ಮರು ಪ್ರಾರಂಭದ ಕುರಿತು ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ದಿನಾಂಕ ಇದುವರೆಗೆ ಅಂತಿಮವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

Advertisement

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಶಾಲಾ ಕಾಲೇಜು ಮರು ಪ್ರಾರಂಭ ಮಾಡುವ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ: ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

ಅಸ್ಸಾಂ, ಮಧ್ಯಪ್ರದೇಶ ಸೇರಿ ಕೆಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳನ್ನು ಪುನರಾರಂಭ ಮಾಡಿದ್ದು, ಈ ಕಾರಣದಿಂದ ರಾಜ್ಯ ಸರ್ಕಾರವೂ ಶಾಲೆ ಆರಂಭಿಸಲು ಮತ್ತೆ ಉತ್ಸುಕವಾಗಿತ್ತು. ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರೂ ಶಾಲೆ ಆರಂಭಿಸಲು ಸರ್ಕಾರ ಉತ್ಸುಕತೆ ತೋರಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next