Advertisement

ISIS; ಬಂಧಿತ ಉಗ್ರರ ಹುಬ್ಬಳ್ಳಿ ಲಿಂಕ್ ಬಗ್ಗೆ ಖಚಿತ ಮಾಹಿತಿಯಿಲ್ಲ: ರೇಣುಕಾ ಸುಕುಮಾರ್

12:42 PM Oct 03, 2023 | Team Udayavani |

ಹುಬ್ಬಳ್ಳಿ: ದೆಹಲಿಯಲ್ಲಿ ಬಂಧನಕ್ಕೆ ಒಳಗಾಗಿರುವ ಇಬ್ಬರು ಶಂಕಿತ ಉಗ್ರರು ಹುಬ್ಬಳ್ಳಿ ಧಾರವಾಡದಲ್ಲಿ ತರಬೇತಿ ಪಡೆದಿದ್ದಾರೆ ಎಂಬ ಕುರಿತಾಗಿ ಯಾವುದೇ ಖಚಿತ ಮಾಹಿತಿಯಿಲ್ಲ. ಆದರೂ ನಾವು ದೆಹಲಿಯ ಪೊಲೀಸರೊಂದಿಗೆ ನಿರಂತರ ಸಂಪರ್ಕ ಹೊಂದಿರುವುದಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಬ್ಬರು ಶಂಕಿತ ಉಗ್ರರು ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ತರಬೇತಿ ಪಡೆದಿದ್ದಾರೆ ಎಂಬುವುದರ ಬಗ್ಗೆ ಅಲ್ಲಿನ ಪೊಲೀಸರು ಸಹ ಖಚಿತ ಮಾಹಿತಿಯನ್ನು ನೀಡಿಲ್ಲ. ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಆಧರಿಸಿ ನಾವು ದೆಹಲಿ ಪೊಲೀಸರನ್ನು ಸಂಪರ್ಕ ಮಾಡಿದ್ದಾಗಿ ಅವರು ತಿಳಿಸಿದರು.

ಪ್ರಕರಣದ ಒಟ್ಟಾರೆ ವಿಷಯವಾಗಿ ದೆಹಲಿ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದು ಮಾಹಿತಿ ಪಡೆಯುತ್ತಿದ್ದೇವೆ ಎಂದರು.

ಭಯೋತ್ಪಾದನೆ ಅಂತಹ ಕೃತ್ಯಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸರು ಸಮರ್ಥರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಧಾರವಾಡದಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿರುವುದಾಗಿ ರೇಣುಕಾ ಸುಕುಮಾರ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next