Advertisement
ಈಗಾಗಲೇ ಬೇರೆ ಜಿಲ್ಲೆಗಳಲ್ಲಿ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ಮಾತ್ರ ಅಧಿಕಾರಿಗಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಆದೇಶ ನೀಡುವ ಮೂಲಕ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಷ್ಟ್ರಪತಿಗಳು ಬೇಡ (ಬುಡ್ಗ) ಜಂಗಮ ಜನಾಂಗದವರನ್ನು ಕೇವಲ ಕಲಬುರಗಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಾತ್ರ ವಾಸವಾಗಿರುತ್ತಾರೆ ಎಂದು ವಿಧಿಸಿದ್ಧ ಕ್ಷೇತ್ರ ನಿರ್ಬಂಧನೆಯನ್ನು 1976ನೇ ಸಾಲಿನಲ್ಲಿ ತೆಗೆದು ಹಾಕಿರುವುದರಿಂದ 1977ರಿಂದ ಜಾರಿಗೆ ಬರುವಂತೆ ಬೇಡ ಜಂಗಮ ರಾಜ್ಯಾದ್ಯಂತ ವಾಸವಾಗಿರುತ್ತಾರೆ ಎಂದು ತಿದ್ದುಪಡಿ ಆದೇಶ ಮಾಡಲಾಗಿದೆ. ಅದರ ಆದೇಶದ ಮೇರೆಗೆ ಬೇಡ ಜಂಗಮರಿಗೆ ಪ್ರಮಾಣ ಪತ್ರ ವಿತರಿಸಲು ಯಾವುದೇ ತಕರಾರಿಲ್ಲ ಎಂದು ತಿಳಿಸಿದರು. ಬೇಡ ಜಂಗಮ ಜಾತಿ ಹಾಗೂ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡುವಾಗ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯದ ಬಹುತೇಕ ತಹಶೀಲ್ದಾರರು ಉಲ್ಲಂಘಿಸುತ್ತಿದ್ದಾರೆ. ಇದು ಕಾನೂನಿನಡಿ ಅಪರಾಧವಾಗುತ್ತದೆ. ಬೇಡ ಜಂಗಮ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
Related Articles
Advertisement