Advertisement
ಮಾತೃಭಾಷೆ ಒಕ್ಕೂಟ ಸಂಘದ ಅಧ್ಯಕ್ಷ ಎಸ್.ಡಿ. ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಕನ್ನಡಿಗರು ಹಾಗೂ ಕರ್ನಾಟಕ ತಮಿಳರ ಸಾಂಸ್ಕೃತಿಕ ಮತ್ತು ಒಗ್ಗಟ್ಟಿನ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
‘ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಮಾತನಾಡಿ, “ಕಾವೇರಿ ವಿಚಾರಕ್ಕೆ ಬಂದಾಗ ತಮಿಳರು ಮತ್ತು ಕನ್ನಡಿಗರ ನಡುವೆ ಅಂತರ ಸೃಷ್ಟಿಯಾಗಿರುವುದು ನಿಜ. ಉಳಿದಂತೆ ತಮಿಳುನಾಡು ಮತ್ತು ಕರ್ನಾಟಕ ನಡುವೆ ಉತ್ತಮ ಸಂಬಂಧ ಇರಬೇಕು ಎಂದು ಬಯಸುತ್ತೇನೆ” ಎಂದು ಹೇಳಿದರು.
”ನಾವೆಲ್ಲ ದಕ್ಷಿಣ ಭಾರತದವರು ಎಂಬುದು ಹೆಮ್ಮೆಯ ವಿಷಯ. ನಾವು ದ್ರಾವಿಡ ಕುಲಕ್ಕೆ ಸೇರಿದವರಾಗಿದ್ದು, ಜತೆಯಾಗಿಯೇ ಇರಬೇಕು. ಅಣ್ಣ- ತಮ್ಮಂದಿರಂತೆ ಬದುಕಬೇಕು. ಉತ್ತರ ಭಾರತೀಯರು ನಮ್ಮ ಮೇಲೆ ಹಿಂದಿ ಹೇರಿಕೆ ಮಾಡುವುದನ್ನು ಜತೆಯಾಗಿಯೇ ಎದುರಿಸಬೇಕು’” ಎಂದರು.
ತರೀಕೆರೆ ಶಾಸಕ ಶ್ರೀನಿವಾಸ್, ಕೊಡಗು ಶಾಸಕ ಮಂಥರ್ ಗೌಡ, ಮಡಿಕೇರಿ ಶಾಸಕ ಎ ಎಸ್ ಪೊನ್ನಣ್ಣ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ರಾಜ್ಯಸಭಾ ಮಾಜಿ ಸದಸ್ಯ ಎಲ್ ಹನುಮಂತಯ್ಯ ಮತ್ತಿತರರು ಇದ್ದರು.
ಕಾವೇರಿ, ಮೇಕೆದಾಟು ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಬೆಂಬಲ
ಕಾರ್ಯಕ್ರಮದಲ್ಲಿ ಒಟ್ಟು 35 ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಪ್ರಮುಖವಾಗಿ ಕರ್ನಾಟಕದ ಭಾಷೆ, ನೆಲ, ಜಲ, ಗಡಿ ಮತ್ತಿತರ ಕರ್ನಾಟಕದ ಹಕ್ಕುಗಳ ರಕ್ಷಿಸಿ ಕೊಳ್ಳುವುದಕ್ಕೆ ಕನ್ನಡಿಗರು ತೆಗೆದು ಕೊಳ್ಳುವ ಎಲ್ಲ ಪ್ರಯತ್ನಗಳಲ್ಲಿಯೂ ಕರ್ನಾಟಕದ ತಮಿಳರು ಕರ್ನಾಟಕ ಸರ್ಕಾರಕ್ಕೆ ಬೆಂಬಲ ನೀಡಲಿದ್ದಾರೆ. ಕಾವೇರಿ ನೀರಿನ ಹಂಚಿಕೆ, ಮಹದಾಯಿ ನೀರಿನ ಹಂಚಿಕೆ, ಮೇಕೆದಾಟು ಅಣೆಕಟ್ಟು ಹಾಗೂ ಬೆಳಗಾವಿ ಗಡಿ ಸಮಸ್ಯೆ ಮುಂತಾದ ರಾಜ್ಯದ ಸಮಸ್ಯೆಗಳಲ್ಲಿ ಕರ್ನಾಟದ ಹಕ್ಕುಗಳ ಪರವಾಗಿ ತಮಿಳರು ಬೆಂಬಲ ನೀಡಲಿದ್ದಾರೆ.
ಕವಿಗೋಷ್ಠಿ
ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್. ಜಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕನ್ನಡ ಕವಿಗೋಷ್ಠಿ ನಡೆದರೆ, ಬಾಬು ಶಶಿಧರನ್ ಅವರು ತಮಿಳು ಕವಿಗೋಷ್ಠಿ ನಡೆಸಿದರು. ಇದೇ ವೇಳೆ 20 ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.