ಶಿವಮೊಗ್ಗ: ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆಯಲ್ಲಿ ತಾರತಮ್ಯ ಮಾಡಬಾರದು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚುವರಿ 2.3 ಲಕ್ಷದಷ್ಟು ಹೆಚ್ಚು ವಿದ್ಯಾರ್ಥಿಗಳು ಪದವಿ ಪ್ರವೇಶಾತಿಗೆ ಅರ್ಹರಾಗಿದ್ದಾರೆ. ಹೀಗಿರುವಾಗ ಸಹಜವಾಗಿ ಪ್ರವೇಶಾತಿ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಉಂಟಾಗಿದೆ.
ಇದನ್ನೂ ಓದಿ:ಚೋಪ್ರಾ ‘ಚಿನ್ನ’ದ ಸಾಧನೆಗೆ ಕುಣಿದು ಕುಪ್ಪಳಿಸಿದ ಹರಿಯಾಣ ಗೃಹ ಸಚಿವ|ವಿಡಿಯೋ
ಕಳೆದೆರೆಡು ವರ್ಷಗಳಲ್ಲಿ ಶಾಲಾ ದಾಖಲಾತಿಯಲ್ಲಿ ಸುಮಾರು 16 ಲಕ್ಷ ಮಕ್ಕಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ವರ್ಗಾವಣೆ ಪಡೆದಿದ್ದಾರೆ. ಈ ವರ್ಷವೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಗಣನೀಯವಾಗಿ ಏರಿಕೆಯಾಗಿದೆ. ಶಾಲಾ ಶಿಕ್ಷಣದ ಪರಿಸ್ಥಿತಿಯೇ ಹೀಗಿರುವಾಗ ಉನ್ನತ ಶಿಕ್ಷಣ ಅದರಲ್ಲೂ ಪದವಿ ಶಿಕ್ಷಣದಲ್ಲಿ ಖಂಡಿತವಾಗಿಯೂ ಸರ್ಕಾರಿ ಇಲ್ಲವಾದಲ್ಲಿ ಅನುದಾನಿತ ಕಾಲೇಜುಗಳಲ್ಲಿ ಬೃಹತ್ ಪ್ರಮಾಣದಲ್ಲಿ ದಾಖಲಾಗಲು ಬಹುತೇಕ ವಿದ್ಯಾರ್ಥಿಗಳು ಮತ್ತು ಪೋಷಕರು ಕಾದಿರುತ್ತಾರೆ. ಕಾಲೇಜುಗಳ ಪ್ರವೇಶಾತಿ ಪ್ರಕ್ರಿಯೆ ಮುಂದೂಡಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷೆ ಕೆ.ಎಸ್. ಅಶ್ವಿನಿ, ರಾಜ್ಯ ಕಾರ್ಯದರ್ಶಿ ಅಜಯ್ ಕುಮಾರ್, ರಕ್ಷಿತಾ, ಅಶ್ರಫ್, ಶಬಾಜ್, ವಿದ್ಯಾ, ಹರ್ಷ, ಅಪೂರ್ವ, ಕಾವ್ಯ ಇನ್ನಿತರರು ಇದ್ದರು.