Advertisement

Bajrang Dal Ban ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

03:40 PM May 25, 2023 | Team Udayavani |

ಬೆಂಗಳೂರು : ರಾಜ್ಯದಲ್ಲಿ ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿದರೆ ಅದು ವೈಯಕ್ತಿಕವಾಗಿರಬಹುದು ಎಂದು ಸಚಿವ ಡಾ.ಜಿ.ಪರಮೇಶ್ವರ್ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ‘ಶಾಂತಿ ಕದಡಿದರೆ ಸರ್ಕಾರವು ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ’ ಎಂದು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಈ ಬಗ್ಗೆ ನಾವು ಯಾವುದೇ ಚರ್ಚೆ ನಡೆಸಿಲ್ಲ, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ, ಅಗತ್ಯವಿದ್ದರೆ ಅವರನ್ನು ನಿಷೇಧಿಸುವ ಮಟ್ಟಕ್ಕೂ ಹೋಗುತ್ತೇವೆ. ಅದನ್ನು ಬಿಟ್ಟರೆ ಈ ಬಗ್ಗೆ ಚರ್ಚೆ ನಡೆದಿಲ್ಲ’ ಎಂದು ಹೇಳಿದ್ದಾರೆ.

”ಮಾಧ್ಯಮಗಳು ಕೇಳಿದಾಗ ಹಲವಾರು ಜನರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿರಬಹುದು, ಆದರೆ ಇದೆಲ್ಲವನ್ನೂ ಚರ್ಚಿಸಬೇಕಾಗಿದೆ. ಪರಿಸ್ಥಿತಿ ಬಂದಾಗ ಸರಕಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ. ಮತಾಂತರ ಮತ್ತು ಗೋಹತ್ಯೆ ತಡೆ ಕಾನೂನುಗಳನ್ನು ಹಿಂಪಡೆಯುವ ಕುರಿತು ಕೇಳಿದ ಪ್ರಶ್ನೆಗೆ, ಸಮಾಜಕ್ಕೆ ವಿರುದ್ಧವಾದ, ಸಮಾಜದಲ್ಲಿ ಶಾಂತಿ ಕದಡುವ ಎಲ್ಲವೂ, ಜನವಿರೋಧಿ, ಅದು ಶಾಸನಗಳು ಅಥವಾ ನಿಯಮಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next