ಚಿತ್ರದುರ್ಗ: ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತವಾಗಿ ನೀರು ಕೊಡುವ ಬಗ್ಗೆ ಸರ್ಕಾರ ಆಲೋಚನೆ ಮಾಡಿಲ್ಲ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.
Related Articles
ಇದನ್ನೂ ಓದಿ:ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ನೋಟಿಸ್ ನೀಡಿದ ಗೋವಾ ಸರ್ಕಾರ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಗೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ನಿರ್ಣಯ ಅದರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.
ಶ್ರೀಘ್ರ ಕ್ರಮ: ಮುರುಘಾ ಮಠದ ಪ್ರಕರಣದ ಬಗ್ಗೆ ಡಿಸಿ ಅವರು ಸರ್ಕಾರಕ್ಕೆ ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವರದಿ ಕಾನೂನು ಇಲಾಖೆಯಲ್ಲಿದ್ದು, ಅತಿ ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುರುಘಾ ಶ್ರೀ ಅವರ ವಿರುದ್ಧ ಪಿತೂರಿ ನಡೆದಿದೆ ಎಂದು ಪ್ರಕರಣ ದಾಖಲಾಗಿ, ಮಾಜಿ ಶಾಸಕರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿದೆ ಪೊಲೀಸ್ ತನಿಖೆ ಮಾಡುತ್ತಿದ್ದಾರೆ ಎಂದರು.