Advertisement

ಹಾಲು ಉತ್ಪಾದನೆ ಮೇಲೆ ಪರಿಣಾಮವಿಲ್ಲ: ಬಾಲಚಂದ್ರ

01:02 AM Mar 21, 2020 | Lakshmi GovindaRaj |

ಬೆಂಗಳೂರು: ಕೊರೊನಾ ಸೊಂಕಿನಿಂದ ಕೆಎಂಎಫ್ ಹಾಲಿನ ಉತ್ಪನ್ನಗಳಿಗೆ ಯಾವುದೇ ನಷ್ಟವಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬುಧವಾರ ಆಡಳಿತ ಮಂಡಳಿ ಸಭೆ ನಡೆಸಿ ಮಾತ ನಾಡಿದ ಅವರು, ಕೊರೊನಾ ವೈರಸ್ಸಿನಿಂದ ಕೆಎಂಎಫ್ ಹಾಲಿನ ಉತ್ಪನ್ನಗಳಿಗೆ ಯಾವುದೇ ರೀತಿಯ ನಷ್ಟವಿಲ್ಲ.

Advertisement

ಕೊರೊನಾ ವೈರಸ್‌ ಬಗ್ಗೆ ನಮ್ಮ ಕೆಎಂಎಫ್ನ ಎಲ್ಲ 14 ಹಾಲು ಒಕ್ಕೂಟಗಳು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸುತ್ತಿವೆ. ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾ ಟಕ ಹಾಲು ಮಹಾಮಂಡಳಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಅವಿರತವಾಗಿ ಶ್ರಮಿಸುತ್ತಿದ್ದಾರೆಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಂಎಫ್ ಬಲವರ್ಧನೆಗೆ ಶ್ರಮಿಸುವಂತೆ ತಿಳಿಸಿದರು.

ಹಾಲು ಶೇಖರಣೆ, ಮಾರಾಟವನ್ನು ಅಭಿವೃದ್ದಿ ಪಡಿಸುವ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಮಾರುಕಟ್ಟೆಯ ಬೆಳವಣಿಗೆಗೆ ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ನಂದಿನಿಯ ಎಲ್ಲ ಉತ್ಪನ್ನಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಹಾಗೂ ಪ್ರಚಾರಪಡಿಸಿ ಸಾರ್ವಜನಿಕರಿಗೆ ನಮ್ಮ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಮನವರಿಕೆ ಮಾಡಿ ಕೊಡಬೇಕು.

ಅಧಿಕಾರಿಗಳು ರೈತರೊಂದಿಗೆ ಉತ್ತಮ ಸಂಬಂಧವನ್ನಿಟ್ಟುಕೊಂಡು ಮಾರುಕಟ್ಟೆಯನ್ನು ವಿಸ್ತರಿಸಬೇಕು. ಒಟ್ಟಿನಲ್ಲಿ ಕೆಎಂಎಫ್ ಸಮಗ್ರ ಅಭಿವೃದ್ದಿಗಾಗಿ ಪಣತೊಡುವಂತೆ ಅವರು ಮನವಿ ಮಾಡಿಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next