Advertisement

ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?

10:07 PM Sep 26, 2022 | Team Udayavani |

ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

Advertisement

ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ.

ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ ಕೇಂದ್ರ ನಾಯಕತ್ವ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next