ಬೆಂಗಳೂರು: ಕೊರೊನಾ 3ನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಜಿ.ಪಂ. ಮತ್ತು ತಾ. ಪಂ. ಚುನಾವಣೆಗಳನ್ನು ಈ ವರ್ಷಾಂತ್ಯದ ವರೆಗೆ ನಡೆಸದಿರಲು ಸರಕಾರ ನಿರ್ಧರಿಸಿದೆ.
ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜಿ.ಪಂ., ತಾ.ಪಂ. ಚುನಾವಣೆ ನಡೆಯದಿದ್ದರೂ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ. ಇಲ್ಲಿ ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಚುನಾವಣೆಗೆ ಅವಕಾಶ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಜಿಲ್ಲೆಗೊಂದು ಸರಕಾರಿ ಗೋ ಶಾಲೆ:
ಬಹುಚರ್ಚಿತ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಜಾರಿಯ ಪ್ರಮುಖ ಹೆಜ್ಜೆಯಾಗಿರುವ ಸರಕಾರಿ ಗೋಶಾಲೆಗಳ ಸ್ಥಾಪನೆಗೂ ಕಾಲ ಕೂಡಿ ಬಂದಿದೆ. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಮೊದಲ ಹಂತದಲ್ಲಿ 15 ಕೋಟಿ ರೂ. ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಅಗತ್ಯ ಬಿದ್ದರೆ ಹೆಚ್ಚಿನ ಅನುದಾನ ನೀಡುವುದಕ್ಕೂ ಸಹಮತ ವ್ಯಕ್ತಪಡಿಸಿದೆ.