Advertisement
ಆರ್ಯನ್ ಅಂತರರಾಷ್ಟ್ರೀಯ ಡ್ರಗ್ ಸಿಂಡಿಕೇಟ್‌ನ ಭಾಗವಾಗಿದ್ದರು ಎಂಬುದನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಅಕ್ಟೋಬರ್ 3 ರಂದು ಎನ್‌ಸಿಬಿ ತಂಡದಿಂದ ಆರ್ಯನ್ ಅವರನ್ನು ಬಂಧಿಸಲಾಯಿತು. ವಿಚಾರಣೆಯ ನಂತರ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಅವರ ಮೊದಲ ಜಾಮೀನನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ನಂತರ, ಖಾನ್ ತನ್ನ ವಕೀಲರ ಮೂಲಕ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು, ಅದು ಅಕ್ಟೋಬರ್ 28 ರಂದು ಅವರಿಗೆ ಜಾಮೀನು ನೀಡಿತ್ತು. ಕಾನೂನು ಪ್ರಕ್ರಿಯೆಗಳ ನಂತರ, ಅಕ್ಟೋಬರ್ 30 ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಇಲ್ಲಿಯವರೆಗೆ, ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ 20 ಜನರನ್ನು ಎನ್‌ಸಿಬಿ ಬಂಧಿಸಿದೆ.
ಎನ್‌ಸಿಬಿಯ ಎಸ್‌ಐಟಿ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಿದ್ದು, ಪ್ರಸ್ತುತ ಕಾನೂನು ಅಭಿಪ್ರಾಯವನ್ನು ಪಡೆಯುತ್ತಿದೆ.