ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇರುವ ಅವಧಿಯನ್ನು ಇನ್ನು ವಿಸ್ತರಿಸಲಾಗುವುದಿಲ್ಲ. ಹೀಗೆಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ನವದೆಹಲಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ಕಳೆದ ವರ್ಷಕ್ಕಿಂತ ಪ್ರಸಕ್ತ ವರ್ಷಕ್ಕಿಂತ ಈ ಬಾರಿ ಶೇ.14ರಷ್ಟು ರಿಟರ್ನ್ಸ್ ಸಲ್ಲಿಕೆ ಹೆಚ್ಚಾಗಿದೆ. 2020ರ ಡಿ.31ರಂದು 4.93 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದ್ದರೆ, ಪ್ರಸಕ್ತ ವರ್ಷ ಇದುವರೆಗೆ 5.62 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ ಎಂದು ಕೇಂದ್ರ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.
ಆರಂಭದಲ್ಲಿ ರಿಟರ್ನ್ಸ್ ಸಲ್ಲಿಕೆಗೆ ಹೊಸ ವೆಬ್‌ಸೈಟ್‌ನಲ್ಲಿ ಕಷ್ಟ ಉಂಟಾಗಿದ್ದರೂ, ನಂತರ ಅದನ್ನು ಸರಿಪಡಿಸಿದ ಬಳಿಕ ಸುಲಭವಾಗಿ ಪ್ರಕ್ರಿಯೆ ನಡೆಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗ ಪ್ರಶಸ್ತಿಗೆ ಸ್ಮೃತಿ ಮಂಧನಾ ನಾಮ ನಿರ್ದೇಶನ
ಪ್ರಸಕ್ತ ವರ್ಷದಲ್ಲಿ ಸೋಂಕಿನ ಹಿನ್ನೆಲೆಯಲ್ಲಿ ಮಾರ್ಚ್ ಬಳಿಕ ಐದು ಬಾರಿ ದಿನಾಂಕ ವಿಸ್ತರಣೆ ಮಾಡಿತ್ತು ಎಂದು ಹೇಳಿದ್ದಾರೆ.