ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವರ್ಷ ನಡೆದ ಯುಪಿಎಸ್ಸಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ (ಜನವರಿ 22, 2021) ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಇದನ್ನೂ ಓದಿ:ಸರ್ಚಿಂಗ್ ನಿಷ್ಕ್ರಿಯಗೊಳಿಸ್ತೇವೆ: ಆಸ್ಟ್ರೇಲಿಯಾ ಸರ್ಕಾರ v\s ಗೂಗಲ್ ಜಟಾಪಟಿ!
ಈ ಬಗ್ಗೆ ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಜಸ್ಟೀಸ್ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠಕ್ಕೆ ಮಾಹಿತಿ ನೀಡಿದರು.
“ಯುಪಿಎಸ್ ಸಿ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಾವು ತಯಾರಾಗಿಲ್ಲ. ಈ ಕುರಿತು ಅಫಿಡವಿತ್ ಸಲ್ಲಿಸಲು ಸಮಯಾವಕಾಶ ನೀಡಬೇಕು. ಮತ್ತೊಂದು ಅವಕಾಶ ನೀಡದಿರುವ ಬಗ್ಗೆ ಕಳೆದ ರಾತ್ರಿ ನನಗೆ ಮಾಹಿತಿ ಬಂದಿರುವುದಾಗಿ ರಾಜು ಅವರು ಜಸ್ಟೀಸ್ ಖಾನ್ವಿಲ್ಕರ್, ಜಸ್ಟೀಸ್ ಬಿಆರ್ ಗವಾಯಿ ಮತ್ತು ಜಸ್ಟೀಸ್ ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧದ ಟೀಂ ಇಂಡಿಯಾದ ಗೆಲುವು ಬದುಕಿಗೆ ದೊಡ್ಡ ಪಾಠ: ಮೋದಿ
ಯುಪಿಎಸ್ ಸಿ ಪರೀಕ್ಷೆ ಮತ್ತೊಂದು ಅವಕಾಶ ನೀಡುವಂತೆ ಕೋರಿ ನಾಗರಿಕ ಸೇವಾ ಹುದ್ದೆಯ ಆಕಾಂಕ್ಷಿ ರಚನಾ ಸಿಂಗ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನವರಿ 25ರಂದು ನಡೆಸುವುದಾಗಿ ತಿಳಿಸಿದ್ದು, ಈ ಸಂದರ್ಭದಲ್ಲಿ ಯುಪಿಎಸ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಅಫಿಡವಿತ್ ಸಲ್ಲಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.