ಮಂಗಳೂರು: ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ರಾಜ್ಯ ಸರ್ಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಎಲ್ಲಾ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸಬೇಕು. ಹೋಳಿ, ಯುಗಾದಿ, ಗುಡ್ ಫ್ರೈಡೆ ಇತ್ಯಾದಿ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಣು, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಸ್ಥಳಗಳಲ್ಲಿ ಸಮಾರಂಭಗಳು, ಜಾತ್ರೆ- ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ:ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು ಕಂಡುಬಂದರೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 56,211 ಕೋವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.94