Advertisement
ಶುಕ್ರವಾರ ಕೇರಳದಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಅಶೋಕ್ ಗೆಹ್ಲೋಟ್, “ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರ ಪ್ರಸ್ತಾಪವನ್ನು ಒಪ್ಪಿಕೊಳ್ಳುವಂತೆ ನಾನು ಅವರಿಗೆ (ರಾಹುಲ್ ಗಾಂಧಿ) ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ ಗಾಂಧಿ ಕುಟುಂಬದ ಯಾರೂ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ” ಎಂದಿದ್ದಾರೆ.
Related Articles
Advertisement
ರಾಹುಲ್ ಗಾಂಧಿ ಅವರೇ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸಬೆಕು ಎಂದು ಹಲವರು ನಾಯಕರು ಒತ್ತಡ ಹೇರಿದ್ದಾರೆ. ಆದರೆ ಇದೀಗ ಗಾಂಧಿ ಕುಟುಂಬವೇ ಸ್ಪರ್ಧೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ “ನಾನು ಕಾಂಗ್ರೆಸ್ ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ” ಎಂದು ಹೇಳಿದ್ದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.