Advertisement

ಸರಕಾರದ ಹಸ್ತಕ್ಷೇಪ ಇಲ್ಲ: ಸಚಿವ ರಿಜಿಜು

12:07 AM Apr 20, 2020 | Sriram |

ಹೊಸದಿಲ್ಲಿ: ರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳ ಕಾರ್ಯನಿರ್ವಹಣೆಯಲ್ಲಿ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂಬ ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) ಅಧ್ಯಕ್ಷ ನರೀಂದರ್‌ ಬಾತ್ರಾ ಅವರ ದೂರು ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯವರ ಖಾರ ಪ್ರತಿಕ್ರಿಯೆಗೆ ಉತ್ತರಿಸಿದ ಕೇಂದ್ರದ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರು ಫೆಡರೇಶನ್‌ಗಳ ಕಾರ್ಯನಿರ್ವಹಣೆಯಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಸಾಯ್‌ ಹಾಗೂ ಕ್ರೀಡಾ ಸಚಿವಾಲಯವು ಕ್ರೀಡಾ ಒಕ್ಕೂಟಗಳ ಕೆಲಸ ಕಾರ್ಯಗಳಲ್ಲಿ ಮಧ್ಯಪ್ರವೇಶ ಮಾಡುತ್ತಿದೆ ಎಂದು ಕೆಲ ದಿನಗಳ ಹಿಂದೆ ನರೀಂದರ್‌ ಬಾತ್ರಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕ್ರೀಡಾ ಸಚಿವರು ಪ್ರತಿಕ್ರಿಯಿಸಿ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುದಿಲ್ಲ ಹಾಗೂ ಎಂಥದ್ದೇ ಪರಿಸ್ಥಿತಿ ಬಂದರೂ ಅವುಗಳ ಸ್ವಾಯತ್ತ ಅಧಿಕಾರವನ್ನು ರಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕ್ರೀಡಾ ಒಕ್ಕೂಟಗಳಿಗೆ ಸೂಕ್ತ ಬೆಂಬಲ ನೀಡಲಾಗುವುದು ಹಾಗೂ ಕ್ರೀಡೆಗಳ ಅಭಿವೃದ್ಧಿಗೆ ಬೇಕಾದ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಕ್ರೀಡಾಪಟುಗಳಿಗೆ ಬೇಕಾದ ಎಲ್ಲ ಅನುಕೂಲಗಳನ್ನು ಒದಗಿಸಲಾಗುವುದು. ದೇಶದ ಕ್ರೀಡಾ ಕ್ಷೇತ್ರವನ್ನು ಪ್ರಗತಿಯ ಹಾದಿಯತ್ತ ಕೊಂಡೊಯ್ಯುವುದೇ ಐಒಎ, ಎನ್‌ಎಫ್ಎಸ್‌ ಹಾಗೂ ಕ್ರೀಡಾ ಸಚಿವಾಲಯದ ಮುಖ್ಯ ಗುರಿಯಾಗಿದೆ ಸರಕಾರ ಸರ್ವ ಸಹಕಾರ ನೀಡುವ ಮೂಲಕ ಭಾರತದ ಕ್ರೀಡೆ ಸೂಪರ್‌ ಪವರ್‌ ಆಗಿ ಬೆಳೆಯಬೇಕು ಎಂದು ರಿಜಿಜು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next