Advertisement

ಸಾರ್ವಜನಿಕ ಗಣೇಶೋತ್ಸವ ಬೇಡ

03:55 PM Aug 15, 2020 | Suhan S |

ಕಾರವಾರ: ಕೋವಿಡ್‌ ಕಾರಣ ಈ ವರ್ಷ ಸಾರ್ವಜನಿಜಕ ಗಣೇಶ ಉತ್ಸವಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಮತಿ ನೀಡಿಲ್ಲ. ಸಾರ್ವಜನಿಕ ಗಣೇಶ ಪ್ರತಿಷ್ಠಾನಪನೆಗೆ ಅವಕಾಶವೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ್‌ ಹೇಳಿದ್ದಾರೆ.

Advertisement

ಕೋವಿಡ್‌-19 ತಡೆಗಟ್ಟುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಲಾಕ್‌ಡೌನ್‌ ನಿರ್ಬಂಧಗಳು ಮುಂದುವರಿಯಲಿವೆ. ಸರ್ಕಾರದ ಆದೇಶದನ್ವಯ ಮನೆ ಮತ್ತು ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಡಿಸಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ವಿಭಾಗಗಳ ಸಹಾಯಕ ಕಮಿಷನರ್‌ ಗಳು, ತಹಶೀಲ್ದಾರರು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದ್ದು, ಮನೆ ಮತ್ತು ದೇವಸ್ಥಾನಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲು ಅವಕಾಶವಿರುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಗುಂಪಾಗಿ ಸೇರದೆ ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ, ಮನೆಯಲ್ಲೇ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಕೋವಿಡ್‌ -19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್‌, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಗಳು ಜಿಲ್ಲಾಡಳಿತದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.

ಕಂಟೈನ್ಮೆಂಟ್‌ ಅಲ್ಲದ ಪ್ರದೇಶಗಳಲ್ಲಿ ಜನ ಜೀವನ, ವ್ಯಾಪಾರ ಎಂದಿನಂತೆ ಇರಲಿದೆ. ಸರ್ಕಾರದ ಆದೇಶವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸಹ ಜಿಲ್ಲಾಧಿಕಾರಿ ಆದೇಶಿಸಿದರು.

Advertisement

ಎಸ್ಪಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಎಸಿ ಪ್ರಿಯಂಕಾ, ತಹಶೀಲ್ದಾರ್‌ ಆರ್‌.ವಿ. ಕಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next