Advertisement

18 ಇಲಾಖೆ ಸಿಬಂದಿಗೆ ರಜೆ ಇಲ್ಲ

01:01 AM Apr 23, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ 18 ಇಲಾಖೆಗಳ ಅಧಿಕಾರಿ, ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅಲ್ಲದೆ ಅವರು ಕೇಂದ್ರ ಸ್ಥಾನ ತೊರೆಯದಂತೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Advertisement

ಪ್ರಮುಖವಾದ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ಸಾರಿಗೆ, ವಾರ್ತಾ, ಇಂಧನ, ಖಜಾನೆ, ಸಿಬಂದಿ ಮತ್ತು ಆಡಳಿತ ಸುಧಾರಣೆ, ಪಶುಸಂಗೋಪನೆ, ಕಾರ್ಮಿಕ, ಅರಣ್ಯ, ಕೃಷಿ, ಕೃಷಿ ಮಾರುಕಟ್ಟೆ ಹಾಗೂ ತೋಟಗಾರಿಕೆಯು ಅಗತ್ಯ ಸೇವೆಗಳೆಂದು ಪಟ್ಟಿ ಮಾಡ ಲಾ ಗಿದೆ. ಈ ಇಲಾಖೆಗಳ ಅಧಿಕಾರಿ ಹಾಗೂ ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರಕಾರದ ವ‌ುುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ 18 ಇಲಾಖೆಗಳ ಸಚಿವಾಲಯ, ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ನೌಕರ, ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಕೋವಿಡ್‌ ನಿರ್ವಹಣೆ, ನಿಯಂತ್ರಣ ಕಾರ್ಯಕ್ಕೆ ನಿಯೋಜನೆಗೊಂಡ ಸಿಬಂದಿ ಕಡ್ಡಾಯವಾಗಿ ಆ ಜವಾಬ್ದಾರಿ ನಿರ್ವಹಿಸಬೇಕು. ಉಳಿದ ಕಚೇರಿ, ಅರೆ ಸರಕಾರಿ, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಶೇ. 50ರಷ್ಟು ಉದ್ಯೋಗಿಗಳು ಕರ್ತವ್ಯಕ್ಕೆ ಹಾಜರಾಗಬೇಕು. ಉಳಿದ ಶೇ. 50ರಷ್ಟು ಸಿಬಂದಿಯನ್ನು ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಸೂಚಿಸಿದ್ದಾರೆ.ದೃಷ್ಟಿ ದೋಷವುಳ್ಳವರು, ವಿಕಲಚೇತನರು ಹಾಗೂ ಗರ್ಭಿಣಿಯರಿಗೆ ವಿನಾಯಿತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next